ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಕೆಲವೇ ದಿನ ಬಾಕಿ ಇದೆ, ಈ ಮಧ್ಯೆ ಯೋಗಿ ಆದಿತ್ಯನಾಥ್ ಸರ್ಕಾರ ಅಯೋಧ್ಯೆಯ 84 ಕಿ.ಮೀ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡಿ ಮಹತ್ವದ ಆದೇಶ ನೀಡಿದೆ.
84 ಕಿ.ಮೀ. ಸುತ್ತಮುತ್ತ ಸಂಪೂರ್ಣವಾಗಿ ಮದ್ಯ ನಿಷೇಧ ಮಾಡಲಾಗಿದೆ ಎಂದು ಸರ್ಕಾರ ಹೇಳಿದೆ. ಈಗಾಗಲೇ ಇರುವ ಮದ್ಯದ ಅಂಗಡಿಗಳನ್ನು ಅಲ್ಲಿಂದ ಸ್ಥಳಾಂತರ ಮಾಡಲಾಗುವುದು, ಹೊಸ ಅಂಗಡಿಗಳಿಗೆ ಅವಕಾಶ ನೀಡುವುದಿಲ್ಲ ಎಂದು ಉತ್ತರಪ್ರದೇಶದ ಅಬಕಾರಿ ಸಚಿವ ನಿತಿನ್ ಅಗರ್ವಾಲ್ ಹೇಳಿದ್ದಾರೆ.