Friday, July 1, 2022

Latest Posts

ಶಿವಮೊಗ್ಗ ಜಿಲ್ಲೆಯಲ್ಲಿ ಶುಕ್ರವಾರ 846 ಜನರಲ್ಲಿ ಕೊರೋನಾ ಸೋಂಕು ದೃಢ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………………..

ಹೊಸ ದಿಗಂತ ವರದಿ, ಶಿವಮೊಗ್ಗ:

ಜಿಲ್ಲೆಯಲ್ಲಿ ಶುಕ್ರವಾರ 846 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಗುಣಮುಖರಾದ 505 ಜನರನ್ನು ಬಿಡುಗಡೆ ಮಾಡಲಾಗಿದೆ.
ಸೋಂಕಿತ 6 ಜನ ಮೃತಪಟ್ಟಿದ್ದು, ಸಾವಿನ ಸಂಖ್ಯೆ 380 ಕ್ಕೆ ಏರಿಕೆಯಾಗಿದೆ.
ಶಿವಮೊಗ್ಗದಲ್ಲಿ 252, ಭದ್ರಾವತಿ 130, ಶಿಕಾರಿಪುರ 99, ತೀರ್ಥಹಳ್ಳಿ 55, ಸೊರಬ 79, ಸಾಗರ 183, ಹೊಸನಗರ 18 ಹಾಗೂ ಹೊರ ಜಿಲ್ಲೆಯ 30 ಪ್ರಕರಣ ದಾಖಲಾಗಿದ್ದು, ಜಿಲ್ಲೆಯಲ್ಲಿ 2780 ಸಕ್ರಿಯ ಪ್ರಕರಣಗಳು ದಾಖಲಾಗಿವೆ. 2156 ಜನರ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗಿದೆ. ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 459 ಜನ, ಖಾಸಗಿ ಆಸ್ಪತ್ರೆಯಲ್ಲಿ 333 ಜನ ಚಿಕಿತ್ಸೆ ಪಡೆಯುತ್ತಿದ್ದು,
1798 ಜನ ಹೋಂ ಕ್ವಾರಂಟೈನ್ ನಲ್ಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss