ದಿಗಂತ ವರದಿ, ಶಿವಮೊಗ್ಗ:
ನಗರದ 86 ಸರ್ಕಾರಿ ಶಾಲೆಗಳಿಗೆ ಮೂಲಸೌಲಭ್ಯಗಳ ಕಲ್ಪಿಸಲು 15 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ ಮಾಡಲಾಗಿದೆ. ಡಿಸೆಂಬರ್ ಅಂತ್ಯದ ಒಳಗಾಗಿ ಎಲ್ಲಾ ಕಾಮಗಾರಿಗಳು ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ನಗರದ ವಿವಿಧ ಶಾಲೆಗಳಿಗೆ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
10ಕೋಟಿ ರೂ. ಮತ್ತು ನೈಸರ್ಗಿಕ ವಿಕೋಪ ಪರಿಹಾರ ನಿಧಿಯಡಿ 4.5 ಕೋಟಿ ರೂ. ಅನುದಾನ ಇದರಲ್ಲಿ ಸೇರಿದೆ. ಈ ಅನುದಾನ
ದಲ್ಲಿ ಕೊಠಡಿಗಳ ದುರಸ್ತಿ, ಹೊಸ ಕೊಠಡಿ ಮತ್ತು ಶೌಚಾಲಯಗಳ ನಿರ್ಮಾಣ, ಕಂಪೌಂಡ್ ಗೋಡೆ ನಿರ್ಮಾಣ ಹಾಗೂ ಖಾಸಗಿ
ಸಹಯೋಗದಲ್ಲಿ ಪೀಠೋಪಕರಣಗಳ ಒದಗಿಸಲಾಗುತ್ತಿದೆ.
ಇದರಲ್ಲಿ 10 ಪ್ರೌಢಶಾಲೆಗಳು ಮತ್ತು 76 ಪ್ರಾಥಮಿಕ ಶಾಲೆಗಳು ಸೇರಿವೆ. 36ಕಾಮಗಾರಿಗಳು ಪೂರ್ಣಗೊಂಡಿದೆ. 30 ಶಾಲೆಗಳಲ್ಲಿ ಕಾಮಗಾರಿ ಪ್ರಗತಿಯಲ್ಲಿವೆ ಎಂದರು.
ಮೇಯರ್ ಸುವರ್ಣ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್, ಡಿಡಿಪಿಐ ರಮೇಶ್ ಉಪಸ್ಥಿತರಿದ್ದರು.