ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶವೇ ಎದುರು ನೋಡುತ್ತಿರುವ ಬಹು ನಿರೀಕ್ಷೆಯ ಬಜೆಟ್ ಇಂದು ಮಂಡನೆಯಾಗಿದೆ. ಈ ಬಜೆಟ್ ಮೇಲೆ ಚರ್ಚೆ, ಪರ ವಿರೋಧಗಳು ಕೇಳಿಬರುತ್ತಿದೆ.
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ 86 ನಿಮಿಷದಲ್ಲಿ ತಮ್ಮ ಬಜೆಟ್ ಭಾಷಣವನ್ನು ಮುಗಿಸಿದ್ದಾರೆ. ಇತ್ತ ಪ್ರಧಾನಿ ಮೋದಿ ಹಾಗೂ ಎನ್‌ಡಿಎ ಕೂಟದ ನಾಯಕರು ಪ್ರತಿ ಘೋಷಣೆಗೆ ಮೇಜು ತಟ್ಟಿ ಮೆಚ್ಚುಗೆ ಸಲ್ಲಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಒಟ್ಟು 124 ಬಾರಿ ಮೇಜು ತಟ್ಟಿ ಅಭಿನಂದನೆ ಸಲ್ಲಿಸಿದ್ದಾರೆ.
ಈ ಬಾರಿಯ ಬಜೆಟ್ ನಲ್ಲಿಮಧ್ಯಮ ವರ್ಗದ ಜನರ ತೆರಿಗೆ ವಿನಾಯಿತಿ ಘೋಷಣೆ ವೇಳೆ ಅತೀ ಹೆಚ್ಚು ಬಾರಿ ಮೋದಿ ಹಾಗೂ ಎನ್‌ಡಿಎ ನಾಯಕರು ಮೇಜು ತಟ್ಟಿದ್ದಾರೆ.
ಇನ್ನು ಈ ಬಾರಿ ಬಜೆಟ್ ಕಳೆದ ಬರಿಕ್ಕಿಂತ ಕಡಿಮೆ ಅವಧಿಯಲ್ಲಿ ಮುಗಿದಿದೆ. 2020ರಲ್ಲಿ ನಿರ್ಮಲಾ ಸೀತಾರಾಮನ್ ಅತೀ ದೊಡ್ಡ ಬಜೆಟ್ ಭಾಷಣ ಮಾಡಿ ದಾಖಲೆ ಬರೆದಿದ್ದಾರೆ. ಬರೋಬ್ಬರಿ 160 ನಿಮಿಷಗಳ ಕಾಲ ಬಜೆಟ್ ಭಾಷಣ ಮಾಡಿದ್ದರು. ಆದರೆ 2021ರಲ್ಲಿ ನಿರ್ಮಲಾ ಸೀತಾರಾಮನ್ 110 ನಿಮಿಷದಲ್ಲಿ ಬಜೆಟ್ ಭಾಷಣ ಮುಗಿಸಿದ್ದರೆ. ಕಳೆದ ವರ್ಷ ಅಂದರೆ 2022ರಲ್ಲಿ 92 ನಿಮಿಷದಲ್ಲಿ ಬಜೆಟ್ ಭಾಷಣ ಮುಗಿಸಿದ್ದರು. ಇದೀಗ ಈ ಬಾರಿ 86 ನಿಮಿಷದಲ್ಲಿ ತಮ್ಮ ಬಜೆಟ್ ಭಾಷಣವನ್ನು ಮುಗಿಸಿದ್ದಾರೆ.