ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದಲ್ಲಿ 862 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು ಇದು ಆರು ತಿಂಗಳಲ್ಲೇ ಅತ್ಯಂತ ಕಡಿಮೆ ಪ್ರಮಾಣ ಎನ್ನಲಾಗಿದೆ. ಕಳೆದ 24 ಗಂಟೆಗಳಲ್ಲಿ 1503 ಜನರು ಚೇತರಿಸಿಕೊಂಡಿದ್ದಾರೆ.
ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ ಸೋಮವಾರ ಸಕ್ರಿಯ ಪ್ರಕರಣಗಳ ಸಂಖ್ಯೆ 22,549 ರಷ್ಟಿದೆ. ಚೇತರಿಕೆಯ ಪ್ರಮಾಣವು 98.76 ಪ್ರತಿಶತದಷ್ಟಿದೆ, ಮತ್ತು ಒಟ್ಟು ಚೇತರಿಕೆಯ ಪ್ರಮಾಣವು 4.40 ಕೋಟಿಗಳನ್ನು ದಾಟಿದೆ.
ಆರೋಗ್ಯ ಸಚಿವಾಲಯದ ಪ್ರಕಾರ, ವಾರದ ಪಾಸಿಟಿವಿಟಿ ದರವು ಶೇಕಡಾ 1.02 ರಷ್ಟಿದ್ದರೆ, ದೈನಂದಿನ ಪಾಸಿಟಿವಿಟಿ ದರವು ದೇಶದಲ್ಲಿ ಶೇಕಡಾ 1.35 ರಷ್ಟಿದೆ.
ಭಾರತದಲ್ಲಿ ಒಟ್ಟು 219.56 ಕೋಟಿ ಲಸಿಕೆಗಳನ್ನು ವಿತರಿಸಲಾಗಿದೆ.