Saturday, April 1, 2023

Latest Posts

ಕಾಸರಗೋಡು ಜಿಲ್ಲೆಯಲ್ಲಿ ಬುಧವಾರ 866 ಮಂದಿಗೆ ಕೊರೋನಾ ಸೋಂಕು

ಹೊಸ ದಿಗಂತ ವರದಿ,ಕಾಸರಗೋಡು:

ಜಿಲ್ಲೆಯಲ್ಲಿ ಬುಧವಾರ 866 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 802 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಜಿಲ್ಲೆಯಲ್ಲಿ ಇದೇ ದಿನ 1901 ಮಂದಿ ಗುಣಮುಖರಾದರು. ಅಲ್ಲದೆ ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಹೊಸದಾಗಿ ಯಾವುದೇ ಸಾವು ಸಂಭವಿಸಿಲ್ಲ.
ಕೇರಳದಲ್ಲಿ 49,771 ಹೊಸ ಪ್ರಕರಣ
ಕೇರಳದ ಬುಧವಾರ ಹೊಸದಾಗಿ 49,771 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 45,846 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ರಾಜ್ಯದಲ್ಲಿ ಒಂದೇ ದಿನ 34,439 ಜನರು ಗುಣಮುಖರಾಗಿದ್ದಾರೆ. ಈ ಮಧ್ಯೆ ಕೇರಳದಲ್ಲಿ 63 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಬುಧವಾರ ಶೇಕಡಾ 48.06 ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!