ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಇಂದು 87 ಜನರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಹೀಗಾಗಿ ಸೋಂಕಿತರ ಸಂಖ್ಯೆ 529ಕ್ಕೆ ಏರಿಕೆಯಾಗಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಕಳೆದ 24 ಗಂಟೆಯಲ್ಲಿ ಆರ್ ಟಿ ಪಿಸಿಆರ್ ಮೂಲಕ 464, ರಾಟ್ ಮೂಲಕ 40 ಸೇರಿದಂತೆ 504 ಮಂದಿಯನ್ನು ಕೊರೋನಾ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 87 ಜನರಿಗೆ ಪಾಸಿಟಿವ್ ಅಂತ ದೃಢಪಟ್ಟಿದೆ ಎಂದು ತಿಳಿಸಿದೆ.
ಕಳೆದ 24 ಗಂಟೆಯಲ್ಲಿ ಸೋಂಕಿತರಾದಂತ 29 ಮಂದಿ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಸದ್ಯ 311 ಸಕ್ರೀಯ ಸೋಂಕಿತರಿದ್ದಾರೆ.