ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಡೇಟ್ ಫಿಕ್ಸ್ ಆಗಿದೆ. ಇಂದು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ ನಡೆದಿದ್ದು, ಡಿಸೆಂಬರ್ 20ರಿಂದ 3 ದಿನಗಳ ಕಾಲ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಡಿ.20, 21 ಮತ್ತು 22ರಂದು ನಡೆಯಲಿದೆ. ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ಕಾರ ಎಲ್ಲ ರೀತಿ ಸಹಕಾರ ನೀಡುತ್ತೆ. ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ಹೆಸರು ಶೀಘ್ರವೇ ಪ್ರಕಟಿಸುತ್ತೇವೆ. ಜಿಲ್ಲಾಡಳಿತ, ಸಾಹಿತ್ಯ ಪರಿಷತ್‌ನವರು ಕೆಲ ಹೆಸರುಗಳನ್ನು ನೀಡಿದ್ದಾರೆ. ಚರ್ಚೆ ಮಾಡಿ ಹೆಸರು ಅಂತಿಮಗೊಳಿಸಲಾಗುವುದು. ಎಲ್ಲರೂ ಸೇರಿ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ನಡೆಸಲು ತೀರ್ಮಾನ ಮಾಡಿದ್ದೇವೆ ಎಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.