January17, 2026
Saturday, January 17, 2026
spot_img

ಕ್ರೈಮ್‌ ಆಗಬಾರದ ಹಾಗೆ ಕಾಯೋ ಪೊಲೀಸರ ಮೇಲೆಯೇ 88 ಕ್ರಿಮಿನಲ್ ಕೇಸ್‌! ನಾಚಿಕೆಯಾಗ್ಬೇಕು ಎಂದ ಸಿಎಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕಳೆದ ಸಾಲಿನಲ್ಲಿ 88 ಕ್ರಿಮಿನಲ್ ಪ್ರಕರಣಗಳಲ್ಲಿ ಪೊಲೀಸರೇ ಭಾಗಿಯಾಗಿರುವುದು ಗೊತ್ತಾಗಿದೆ. ಇದು ನಾಚಿಗೇಡಿನ ವಿಷಯ. ಸರ್ಕಾರಕ್ಕೆ ಮಾತ್ರವಲ್ಲ, ಪೊಲೀಸ್ ಇಲಾಖೆಗೂ ಕೆಟ್ಟ ಹೆಸರು ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಿಡಿಸಿದ್ದಾರೆ.

ಬೆಂಗಳೂರಿನ ಮಹಾ ನಿರ್ದೇಶಕರು ಹಾಗೂ ಆರಕ್ಷಕ ಮಹಾನಿರೀಕ್ಷಕರ ಕಚೇರಿಯಲ್ಲಿ ಆಯೋಜಿಸಿದ್ದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಕೆಲವು ಪೊಲೀಸ್​​ ಠಾಣೆಗಳು ಉತ್ತಮ ಕೆಲಸ ಮಾಡುತ್ತಿವೆ. ಇನ್ನೂ ಕೆಲವು ಠಾಣೆಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಪೊಲೀಸ್​​ ಅಧಿಕಾರಿಗಳಿಗೆ ಗೊತ್ತಾಗದೇ ಕ್ರೈಂ ನಡೆಯಲು ಸಾಧ್ಯವಿಲ್ಲ, ಪೊಲೀಸರು ಬಲಾಢ್ಯರ ಕೈಗೊಂಬೆಯಂತೆ ಕೆಲಸ ಮಾಡಬಾರದು. ರಾಯಚೂರಿನ ಕವಿತಾಳ ಠಾಣೆ ದೇಶದಲ್ಲೇ 3ನೇ ಸ್ಥಾನ ಪಡೆದುಕೊಂಡಿದೆ‌ ಎಂದರು.

ನಮ್ಮಲ್ಲಿ ಕಳ್ಳತನ, ಸುಲಿಗೆ, ದರೋಡೆ ಪ್ರಕರಣ ಕಡಿಮೆ ಆಗುತ್ತಿದೆ. ಆದರೆ ಸೈಬರ್ ಕ್ರೈಂ ಮತ್ತು ಡ್ರಗ್ಸ್ ಪೆಡ್ಲಿಂಗ್ ಜಾಸ್ತಿ‌ ಆಗುತ್ತಿದೆ. ಡ್ರಗ್ಸ್ ಮುಕ್ತ ರಾಜ್ಯ ಮಾಡಬೇಕೆಂದು ನಮ್ಮ ಸರ್ಕಾರದಿಂದ ಹೋರಾಟ ಮಾಡಲಾಗುತ್ತಿದೆ. ಪೊಲೀಸರು ಸರಿಯಾಗಿ ಕೆಲಸ ಮಾಡಿದರೆ ಎಲ್ಲವನ್ನೂ ಮಟ್ಟಹಾಕಬಹುದು ಎಂದಿದ್ದಾರೆ.

ಡ್ರಗ್ಸ್ ಮುಕ್ತಮಾಡಲು ವ್ಯಸನಿ ವಿಚಾರಣೆ ಮಾಡಿದರೆ ಮೂಲ ಮಾಹಿತಿ ಸಿಗುತ್ತದೆ. ಪೆಡ್ಲರ್​ ವಿಚಾರಣೆ ‌ಮಾಡಿದರೆ ಎಲ್ಲಿಂದ ಡ್ರಗ್ಸ್​ ಬಂತು ಅಂತಾ ಗೊತ್ತಾಗುತ್ತೆ‌. ಅಪರಾಧದಲ್ಲಿ ಭಾಗಿಯಾದ ವಿದೇಶಿಯರನ್ನು ಅವರ ದೇಶಕ್ಕೆ ವಾಪಸ್ ಕಳಿಸುವ ಕೆಲಸ ಮಾಡುತ್ತೇವೆ. ಪಿಐ, ಪಿಎಸ್​​ಐ ಸೇರಿ ಎಲ್ಲರ ಮೇಲೂ ಹಿರಿಯ ಅಧಿಕಾರಿಗಳು ನಿಗಾ ವಹಿಸಬೇಕು. ಮಹಾರಾಷ್ಟ್ರದ ಪೊಲೀಸರು ಬಂದು ಮೈಸೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆ ಮಾಡಿದ್ದಾರೆ. ಅದನ್ನು ಕರ್ನಾಟಕ ಪೊಲೀಸರು ಏಕೆ ಮಾಡುತ್ತಿಲ್ಲ. ಈ ರೀತಿ ಇನ್ಮುಂದೆ ಆಗಬಾರದು ಅಂತಾ ಪೊಲೀಸರಿಗೆ ತಿಳಿಸಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Must Read

error: Content is protected !!