ಪ್ರಧಾನಿ ಮೋದಿ ಸರ್ಕಾರಕ್ಕೆ 8ನೇ ವರ್ಷಾಚರಣೆ: ಮೇ 30- ಜೂನ್ 14ವರೆಗೆ ಬಿಜೆಪಿಯಿಂದ ಬೃಹತ್‌ ಪ್ರಚಾರಾಂದೋಲನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 8ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಬಿಜೆಪಿಯು ಮೇ 30ರಿಂದ ಜೂನ್‌ 14ರ ವರೆಗೆ ದೇಶದಾದ್ಯಂತ ಬೃಹತ್‌ ಪ್ರಚಾರಾಂದೋಲನ ಹಮ್ಮಿಕೊಂಡಿದೆ.
ಈ ಕುರಿತು  ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್‌ ಸಿಂಗ್, ಈ ಕಾರ್ಯಕ್ರಮದಲ್ಲಿ ಕೇಂದ್ರದ ಎಲ್ಲ ಸಚಿವರು, ಬಿಜೆಪಿ ನೇತೃತ್ವದ ರಾಜ್ಯಗಳ ಮಂತ್ರಿಗಳು, ಪಕ್ಷದ ಚುನಾಯಿತ ಪ್ರತಿನಿಧಿಗಳು ಪಾಲ್ಗೊಳ್ಳುವರು. ಬಡವರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳು ಹಾಗೂ ಉತ್ತಮ ಆಡಳಿತದ ಬಗ್ಗೆ ಜನರಿಗೆ ಮಾಹಿತಿ ನೀಡುವರು ಎಂದರು.
ಮೇ 30ರಂದು ಕೋವಿಡ್‌ನಿಂದಾಗಿ ಅನಾಥರಾಗಿರುವ ಮಕ್ಕಳಿಗೆ ಪ್ರಧಾನಿ ಮೋದಿ ಅವರು ಪರಿಹಾರಧನದ ಚೆಕ್‌ಗಳನ್ನು ವಿತರಿಸುವರು. ಅವರಿಗೆ ವಿದ್ಯಾರ್ಥಿವೇತನವನ್ನು ಅದೇ ದಿನ ಘೋಷಿಸುವರು ಎಂದು ತಿಳಿಸಿದರು.
‘ಸೇವೆ, ಉತ್ತಮ ಆಡಳಿತ, ಬಡವರ ಕಲ್ಯಾಣಕ್ಕಾಗಿ ಜಾರಿಗೊಳಿಸಿರುವ ಕಾರ್ಯಕ್ರಮಗಳು ಮೋದಿ ನೇತೃತ್ವದ ಸರ್ಕಾರದ ಆದ್ಯತೆಗಳಾಗಿವೆ. ಈ ಬಗ್ಗೆ ದೇಶದ ಪ್ರತಿ ಪ್ರಜೆಗೂ ಮಾಹಿತಿ ನೀಡಲು ಪ್ರಚಾರಾಂದೋಲನ ವೇಳೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಇದಕ್ಕಾಗಿ ಈ ಅವಧಿಯಲ್ಲಿ ಬೂತ್‌ನಿಂದ ರಾಷ್ಟ್ರ ಮಟ್ಟದ ವರೆಗೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು  ಹೇಳಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!