ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಂಡೀಗಢದಲ್ಲಿ ಬುಧವಾರ ರೈತ ಮುಖಂಡರೊಂದಿಗೆ ಕೇಂದ್ರ ಸರಕಾರ ಮತ್ತೊಂದು ಸುತ್ತಿನ ಮಾತುಕತೆ ನಡೆಸಿದರು.
ಮಾತುಕತೆಯಲ್ಲಿ ಕೇಂದ್ರದ ಪರವಾಗಿ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಹ್ಲಾದ್ ಜೋಶಿ ಮತ್ತು ಕೈಗಾರಿಕೆಗಳು ಮತ್ತು ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರು ಪಾಲ್ಗೊಂಡಿದ್ದಾರೆ.
ಈ ಸಭೆಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಯನ್ನು ರಚಿಸುವ 28 ರೈತ ಸಂಘಗಳ ಪ್ರತಿನಿಧಿಗಳು ಭಾಗವಹಿಸಿದರು.
ಫೆಬ್ರವರಿ 2024ರಿಂದ ಇಲ್ಲಿಯವರೆಗೂ 7 ಸುತ್ತಿನ ಸಭೆಗಳು ನಡೆದಿವೆ. ಇಂದು ರೈತ ನಾಯಕರು ಮತ್ತು ಕೇಂದ್ರ ಸರ್ಕಾರದ ನಡುವಿನ 8ನೇ ಸಭೆ ನಡೆಯುತ್ತಿದ್ದು, ಕುತೂಹಲ ಕೆರಳಿಸಿದೆ.
ಕಿಸಾನ್ ಮಜ್ದೂರ್ ಮೋರ್ಚಾ ನಾಯಕ ಸರ್ವಾನ್ ಸಿಂಗ್ ಪಂಧೇರ್ ಮಾತನಾಡಿ, ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (MSP) ಸೇರಿದಂತೆ ತಮ್ಮ ಬಹುದಿನಗಳ ಬೇಡಿಕೆಗಳನ್ನು ಕೇಂದ್ರ ಸರ್ಕಾರ ಈಡೇರಿಸುತ್ತದೆ ಎಂದು ರೈತ ಸಂಘಗಳು ನಿರೀಕ್ಷಿಸುತ್ತಿವೆ ಎಂದು ಹೇಳಿದರು.