Thursday, August 11, 2022

Latest Posts

9.69 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಡೇಟಾ!

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ತಮಿಳುನಾಡು ರಾಜ್ಯದ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಗುಡ್ ನ್ಯೂಸ್ ನೀಡಿದ್ದಾರೆ. ಅವರು 9.69 ಲಕ್ಷ ಕಾಲೇಜು ವಿದ್ಯಾರ್ಥಿಗಳಿಗೆ ಪ್ರತಿದಿನ ಉಚಿತವಾಗಿ 2 ಜಿಬಿ ಡೇಟಾ ನೀಡುವುದಾಗಿ ಭಾನುವಾರ ಹೇಳಿದ್ದಾರೆ.
ಏಪ್ರಿಲ್‌ ವರೆಗೆ ಆನ್‌ಲೈನ್‌ ತರಗತಿಗಳಿಗೆ ಹಾಜರಾಗಲು ವಿದ್ಯಾರ್ಥಿಗಳಿಗೆ ಈ ಸೌಲಭ್ಯ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.
ಕೋವಿಡ್‌-19ನಿಂದಾಗಿ ಅನೇಕ ತಿಂಗಳು ಕಾಲ ತರಗತಿಗಳು ನಡೆದಿಲ್ಲ. ಈಗ ಆನ್‌ಲೈನ್‌ ಮೂಲಕ ಪಾಠ ಹೇಳಲಾಗುತ್ತಿದೆ. ಈ ಕಾರಣಕ್ಕೆ ಉಚಿತ ಡೇಟಾ ನೀಡಲು ನಿರ್ಧರಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss