Thursday, June 1, 2023

Latest Posts

ಪಿಯು ಫಲಿತಾಂಶ ಅನುತ್ತೀರ್ಣ: 48 ಗಂಟೆಗಳಲ್ಲಿ 9 ವಿದ್ಯಾರ್ಥಿಗಳು ಆತ್ಮಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಆಂಧ್ರಪ್ರದೇಶದ ಮಧ್ಯಂತರ ಪರೀಕ್ಷಾ ಮಂಡಳಿಯು ಬುಧವಾರ 11 ಮತ್ತು 12 ನೇ ತರಗತಿಯ ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಿದೆ. ಕಳೆದ 48 ಗಂಟೆಗಳಲ್ಲಿ ಪರೀಕ್ಷೆಯಲ್ಲಿ ಪಾಸಾಗದ ಕಾರಣ 9 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಆಂಧ್ರಪದೇಶದಲ್ಲಿ ನಡೆದಿದೆ. ಇನ್ನಿಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ವರದಿಯಾಗಿದೆ.

ಸುಮಾರು 10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 11ನೇ ತರಗತಿಯಲ್ಲಿ ಶೇ 61ರಷ್ಟು ಉತ್ತೀರ್ಣರಾಗಿದ್ದರೆ, 12ನೇ ತರಗತಿಯಲ್ಲಿ ಶೇ 72ರಷ್ಟು ಫಲಿತಾಂಶ ಬಂದಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಫೆಬ್ರವರಿಯಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಸಂತ್ರಸ್ತರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದ ಅವರು, ನಮ್ಮ ಶಿಕ್ಷಣ ಸಂಸ್ಥೆಗಳು ಎಲ್ಲಿ ಎಡವುತ್ತಿವೆ ಎಂಬ ಬಗ್ಗೆ ಆತಂಕ ಹೊರಹಾಕಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!