9 ಮಂದಿ ಬಾಂಗ್ಲಾ ಪ್ರಜೆಗಳು ಪೊಲೀಸ್ ವಶಕ್ಕೆ; ತೀವ್ರ ವಿಚಾರಣೆ

ಹೊಸದಿಗಂತವ ವರದಿ, ರಾಮನಗರ
ಸುಳ್ಳು ಹೇಳಿಕೊಂಡು ಗಾರ್ಮೆಂಟ್ಸ್ ನಲ್ಲಿ ಕೆಲಸಕ್ಕೆ ಸೇರಿದ್ದ 9 ಜನ ಬಾಂಗ್ಲಾ ಪ್ರಜೆಗಳನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ರಾಮನಗರದಲ್ಲಿ ನಡೆದಿದೆ.
ಕಳೆದ 12 ದಿನಗಳಿಂದ 9 ಬಾಂಗ್ಲಾ ಪ್ರಜೆಗಳು ಇಲ್ಲಿನ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದರು.
ಪಶ್ಚಿಮ ಬಂಗಾಳದ ನಿವಾಸಿಗಳು ಎಂದು ಸುಳ್ಳು ಮಾಹಿತಿ ನೀಡಿ ಕೆಲಸಕ್ಕೆ ಸೇರಿದ್ದರು ಎಂದು ತಿಳಿದುಬಂದಿದೆ.
9 ಜನರ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ರಾಮನಗರ ಪೊಲೀಸರು 9 ಬಾಂಗ್ಲಾ ಪ್ರಜೆಗಳನ್ನು ವಶಕ್ಕೆ ಪಡೆದು ತನಿಖೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here