spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, October 17, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಬೆಂಗಳೂರಿನಲ್ಲಿ 9 ತಿಂಗಳ ಕಂದಮ್ಮ ಕೊಂದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

- Advertisement -Nitte

ಹೊಸದಿಗಂತ ಆನ್ ಲೈನ್ ಡೆಸ್ಕ್:

ಬೆಂಗಳೂರಿನಲ್ಲಿ 9 ತಿಂಗಳ ಹಸುಗೂಸನ್ನು ಕೊಂದು ನಾಲ್ವರು ಆತ್ಮಹತ್ಯೆಗೆ ಶರಣಾದ ಘಟನೆ ಇಂದು ನಡೆದಿದೆ.
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಸ್ಥಳೀಯ ಪತ್ರಿಕೆಯ ಸಂಪಾದಕರು ಹಾಗೂ ಅವರ ಕುಟುಂಬ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ ಐದು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತಿಗಳರ ಪಾಳ್ಯದಲ್ಲಿ ಘಟನೆ ನಡೆದಿದೆ.
ಮನೆಯಲ್ಲಿ ಪ್ರತಿದಿನ ಗಲಾಟೆ ನಡೆಯುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಶಂಕರ್ ಪತ್ನಿ, ಓರ್ವ ಮಗ, ಇಬ್ಬರು ಹೆಣ್ಣುಮಕ್ಕಳು ಸಹ ಆತ್ಮಹತ್ಯೆಗೆ ಶರಣಾಗಿದ್ದಾರೆ. 9 ತಿಂಗಳ ಮಗುವನ್ನು ಮೊದಲು ಸಾಯಿಸಿ ಬಳಿಕ ಇಡೀ ಕುಟುಂಬ ಸಾವಿಗೆ ಶರಣಾಗಿದೆ ‌ಎಂದು ತಿಳಿದುಬಂದಿದೆ.
ಐದು ದಿನದ ಹಿಂದೆಯೇ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತದೇಹಗಳು ಕೊಳೆತ ಸ್ಥಿತಿಯಲ್ಲಿ ದೊರೆತಿವೆ. ಶಂಕರ್​ ಅವರ ಪತ್ನಿ ಭಾರತಿ (50), ಇಬ್ಬರು ಪುತ್ರಿಯರಾದ ಸಿಂಚನ (33), ಸಿಂಧುರಾಣಿ (30), ಮಗ ಮಧು ಸಾಗರ (27) ಹಾಗೂ 9 ತಿಂಗಳ ಮಗುವಿನ ಮೃತದೇಹಗಳು ಪತ್ತೆಯಾಗಿವೆ.
ಮನೆಯಲ್ಲಿ ಒಟ್ಟು 6 ಮಂದಿ ಇದ್ದರು. ಇವರಲ್ಲಿ 5 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದು, 3 ವರ್ಷದ ಒಂದು ಮಗು ಮಾತ್ರ ಬದುಕುಳಿದಿದೆ. 5 ದಿನಗಳಿಂದ ಆಹಾರವಿಲ್ಲದೆ ನಿತ್ರಾಣವಾಗಿದ್ದ ಮಗುವನ್ನ ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss