Monday, July 4, 2022

Latest Posts

ಆಟೋ-ಲಾರಿ ಮುಖಾಮುಖಿ ಡಿಕ್ಕಿ, 9ಮಂದಿ ಸಾವು: ಮೃತರ ಕುಟುಂಬಸ್ಥರಿಗೆ ಪ್ರಧಾನಿ ಪರಿಹಾರ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯ ಎಲ್ಲರೆಡ್ಡಿ ವಲಯದ ಅನ್ನಸಾಗರತಾಂಡ ಬಳಿ ಭಾನುವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸಂಬಂಧಿಕರ ಮನೆಗೆ ತೆರಳುತ್ತಿದ್ದ ವೇಳೆ ಟ್ರಾಲಿ ಆಟೋಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಚಾಲಕ ಸಾಯಿ (35) ಸಾದರಪಲ್ಲಿ ಲಚ್ಚವ್ವ (65) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾಯವ್ವ (45) ವೀರಮಣಿ (38) ಮೃತಪಟ್ಟಿದಾರೆ, ಇತರ 13 ಮಂದಿ ಗಂಭೀರವಾಗಿ ಗಾಯಗೊಂಡು ಬಾನ್ಸವಾಡ ಆಸ್ಪತ್ರೆಗೆ ಸಾಗಿಸಲ್ಪಟ್ಟರು. ಮುರಗಲ್ಲ ಅಂಜವ್ವ (40)ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. 11 ಮಂದಿಯನ್ನು ಎಲ್ಲರೆಡ್ಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, 8 ಮಂದಿಯನ್ನು ನಿಜಾಮಾಬಾದ್ ಆಸ್ಪತ್ರೆಗೆ ರವಾನಿಸಲಾಗಿದೆ, ವೀರಮ್ಮ (70), ಗಂಗಾಮಣಿ (40), ಪೋಚಯ್ಯ (60) ಮತ್ತು ಎಲ್ಲಯ್ಯ (53) ಮೃತಪಟ್ಟಿದ್ದಾರೆ. ಉಳಿದವರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಆಟೋ ಚಾಲಕ ಪಾನಮತ್ತನಾಗಿದ್ದರಿಂದ ಅಪಘಾತ ಸಂಭವಿಸಿದೆ ಎಂದು ಗಾಯಾಳುಗಳು ಹೇಳಿದ್ದಾರೆ. ಎಲ್ಲರೆಡ್ಡಿ ಸಿಐ ಶ್ರೀನಿವಾಸ್ ಹಾಗೂ ಎಸ್ಸೈ ಗಣೇಶ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸ್ಪಂದಿಸಿದ್ದು, ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿದ್ದಾರೆ. ಕುಟುಂಬಸ್ಥರಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ, ಹಾಗೂ ಗಾಯಾಳುಗಳು ಶೀಘ್ರ ಗುಣಮುಖರಾಗಲೆಂದು ಆಶಿಸಿದ್ದಾರೆ. ಸಾವನ್ನಪ್ಪಿದ ಕುಟುಂಬಸ್ಥರಿಗೆ 2ಲಕ್ಷ ಹಾಗೂ ಗಾಯಾಳುಗಳಿಗೆ 50,000 ಪರಿಹಾರ ಘೋಷಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss