Sunday, January 29, 2023

Latest Posts

ಲಕ್ನೋ ಬಳಿ ಕೊಳದಲ್ಲಿ ಬಿದ್ದ ಟ್ರ್ಯಾಕ್ಟರ್ ಟ್ರಾಲಿ: 9 ಮಂದಿ ಸಾವು, 4ಲಕ್ಷ ಪರಿಹಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಸೋಮವಾರ ಲಕ್ನೋದ ಇಟೌಂಜಾದಿಂದ ಕುಮ್ರಾವಾನ್ ರಸ್ತೆಯಲ್ಲಿ 46 ಜನರನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿಯು ಹೊಂಡಕ್ಕೆ ಬಿದ್ದ ಪರಿಣಾಮ 9 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಇಟೌಂಜಾ ಸಿಎಚ್‌ಸಿಗೆ ದಾಖಲಿಸಲಾಗಿದೆ.

ಲಕ್ನೋದ ಜಿಲ್ಲಾ ಮ್ಯಾಜಿಸ್ಟ್ರೇಟ್ ಸೂರ್ಯಪಾಲ್ ಗಂಗ್ವಾರ್ ನೀಡಿದ ಮಾಹಿತಿ ಪ್ರಕಾರ, ಇದುವರೆಗೆ 34 ಜನರನ್ನು ಕೊಳದಿಂದ ರಕ್ಷಣೆ ಮಾಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ರಾಜ್ಯ ವಿಪತ್ತು ಪರಿಹಾರ ಪಡೆ (SDRF) ತಂಡವು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ ಎಂದರು.

ಮೃತರ ಗುರುತುಗಳು ಇನ್ನೂ ಪತ್ತೆಯಾಗಿಲ್ಲ, ಎಲ್ಲರೂ ಸೀತಾಪುರದ ಅಟ್ಟಾರಿಯಾ ನಿವಾಸಿಗಳಾಗಿದ್ದು ವರಾತ್ರಿಯ ಸಂದರ್ಭದಲ್ಲಿ ಇಟೌಂಜಾದಲ್ಲಿರುವ ಉನ್ನೈ ದೇವಿ ದೇವಸ್ಥಾನಕ್ಕೆ ಭೇಟಿ ನೀಡಲು ಬಂದಿದ್ದರು ಎಂದು ಲಕ್ನೋ ಗ್ರಾಮಾಂತರ ಪೊಲೀಸ್ ಅಧೀಕ್ಷಕ ಹಿರ್ದೇಶ್ ಕುಮಾರ್ ತಿಳಿಸಿದರು. ಘಟನೆಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್‌ ಆಘಾತ ವ್ಯಕ್ತಪಡಿಸಿದ್ದು, ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!