ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರಾಖಂಡದ ಪಿಥೋರಗಢದಲ್ಲಿ ಎಸ್‌ಯುವಿ ಕಾರು ಕಂದಕಕ್ಕೆ ಉರುಳಿದ ಪರಿಣಾಮ ಒಂಬತ್ತು ಮಂದಿ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಬೊಲೆರೋ ಕಾರಿನಲ್ಲಿ ಪ್ರಯಾಣಿಸುತ್ತಿದ್ದ 11 ಜನರಲ್ಲಿ 9 ಮಂದಿ ಸಾವನ್ನಪ್ಪಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಪಿಥೋರಗಢ ಜಿಲ್ಲೆಯ ಮುನ್ಸಿಯಾರಿ ಬ್ಲಾಕ್‌ನ ಹೊಕ್ರಾದಲ್ಲಿ ಈ ಘಟನೆ ನಡೆದಿದೆ. ಮೃತರು ರಾಜ್ಯದ ಬಾಗೇಶ್ವರ ಜಿಲ್ಲೆಯ ಸಾಮಾ ಗ್ರಾಮದಿಂದ ಹೊಕ್ರಾದಲ್ಲಿರುವ ಕೋಕಿಲಾ ದೇವಿ ದೇವಸ್ಥಾನಕ್ಕೆ ತೆರಳುತ್ತಿರುವ ವೇಳೆ ಈ ದುರಂತ ಸಂಭವಿಸಿದೆ.
ಪೊಲೀಸರು ಮತ್ತು ಎಸ್‌ಡಿಆರ್‌ಎಫ್ ತಂಡಗಳು ಅಪಘಾತ ನಡೆದ ಸ್ಥಳದಲ್ಲಿವೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.