Thursday, July 7, 2022

Latest Posts

ಕಾಲುವೆಗೆ ಉರುಳಿ ಬಿದ್ದ ಬಸ್: 9 ಮಂದಿ ಪ್ರಯಾಣಿಕರ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಸ್ ವೊಂದು ಕಾಲುವೆಗೆ ಉರುಳಿ ಬಿದ್ದ ಪರಿಣಾಮ 9 ಮಂದಿ ಪ್ರಯಾಣಿಕರು ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ಪಶ್ಚಿಮ ಗೋದಾವರಿಯ ಜಲ್ಲೇರು ವಾಗು ಎಂಬಲ್ಲಿ ನಡೆದಿದೆ.
ಈ ಬಸ್ ಅಶ್ವರಾವ್ ಪೇಟೆಯಿಂದ ಜಂಗಾರೆಡ್ಡಿಗುಡೆಂಗೆ ತೆರಳುತ್ತಿತ್ತು. ಬಸ್ ನಲ್ಲಿ 47 ಪ್ರಯಾಣಿಕರು ಸಂಚರಿಸುತ್ತಿದ್ದರು ಎಂಬ ಮಾಹಿತಿ ತಿಳಿದುಬಂದಿದೆ. ಅಪಘಾತದ ವೇಳೆ ಐವರು ಮಹಿಳೆಯರು ಸೇರಿ ಕನಿಷ್ಟ ಒಂಬತ್ತು ಮಂದಿ ಮೃತಪಟ್ಟಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಅಗತ್ಯ ನೆರವು ನೀಡುವಂತೆ ರಾಜ್ಯಪಾಲರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss