ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳ್ಳಂಬೆಳಗ್ಗೆ ರೈಲು ಬೋಗಿಯಲ್ಲಿ ಹೊತ್ತಿ ಉರಿದ ಬೆಂಕಿಗೆ 9ಜನ ಸಜೀವ ದಹವಾಗಿರುವ ಘಟನೆ ಮಧುರೈ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಮೃತರೆಲ್ಲರೂ ಉತ್ತರಪ್ರರದೇಶದ ಮೂಲದವರೆಂದು ತಿಳಿದುಬಂದಿದೆ. ಇನ್ನೂ ನಾಲ್ವರ ಸ್ಥಿತಿ ಚಿಂತಾಜನಕವಾಗಿದ್ದು, 20ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ಶನಿವಾರ ಮುಂಜಾನೆ 5.15 ಕ್ಕೆ ಮಧುರೈ ರೈಲು ನಿಲ್ದಾಣದ ಬಳಿ ಭಾರತ್ ಗೌರವ್ ವಿಶೇಷ ರೈಲಿನಲ್ಲಿ ಈ ದುರಂತ ಸಂಭವಿಸಿದೆ. ಮಧುರೈನಲ್ಲಿ ನಿಲ್ಲಿಸಿದ್ದ ಈ ರೈಲು ತಿರುಪತಿ-ರಾಮೇಶ್ವರಂ-ಕನ್ಯಾಕುಮಾರಿ ಮುಂತಾದ ಸ್ಥಳಗಳಿಗೆ ಪ್ರಯಾಣಿಸಬೇಕಿತ್ತು. ಮೃತರ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ ಎಂದು ದಕ್ಷಿಣ ರೈಲ್ವೆ ಇಂದು ಪ್ರಕಟಿಸಿದೆ.
ದಕ್ಷಿಣ ರೈಲ್ವೆ ನೀಡಿದ ಪ್ರಕಾರ, ಅಕ್ರಮವಾಗಿ ಕಳ್ಳಸಾಗಣೆ ಮಾಡಿದ ಗ್ಯಾಸ್ ಸಿಲಿಂಡರ್‌ನಿಂದ ಬೆಂಕಿ ಹೊತ್ತಿಕೊಂಡಿರುವುದಾಗಿ ತಿಳಿದುಬಂದಿದೆ. ರೈಲಿನಲ್ಲಿದ್ದ ಯಾತ್ರಿಕರು ಇಂದು ಬೆಳಿಗ್ಗೆ ಕಾಫಿ ಮಾಡಲು ಗ್ಯಾಸ್ ಸ್ಟೌವ್ ಹೊತ್ತಿಸಲು ಪ್ರಯತ್ನಿಸಿದಾಗ, ಸಿಲಿಂಡರ್ ಬ್ಲಾಸ್ಟ್ ಆಗಿದೆ. ಇದುವರೆಗೂ ಒಟ್ಟು 55 ಜನರನ್ನು ರಕ್ಷಿಸಲಾಗಿದ್ದು, ಸದ್ಯಕ್ಕೆ ಒಂಬತ್ತು ಮೃತದೇಹಗಳನ್ನು ಹೊರತೆಗೆದಿದ್ದೇವೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಮಧುರೈ ಜಿಲ್ಲಾಧಿಕಾರಿ ಸಂಗೀತಾ ತಿಳಿಸಿದರು.