ಉದ್ಯಮಿ ಆರ್.ಎನ್.ನಾಯಕ್ ಕೊಲೆ ಪ್ರಕರಣ;‌ ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 9 ಜನ ದೋಷಿಗಳು

ಹೊಸದಿಗಂತ ವರದಿ, ಬೆಳಗಾವಿ
ಉತ್ತರಕನ್ನಡ ಜಿಲ್ಲೆಯ ಅಂಕೋಲಾದ ಖ್ಯಾತ ಉದ್ಯಮಿ ಆರ್.ಎನ್. ನಾಯಕ್ ಕೊಲೆ ಪ್ರಕರಣ ಸಂಬಂಧ ಇಲ್ಲಿನ ಕೋಕಾ ನ್ಯಾಯಾಲಯವು ತೀರ್ಪು ಪ್ರಕಟಿಸಿದ್ದು, ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 9 ಆರೋಪಿತರನ್ನು ದೋಷಿ ಎಂದು ಬುಧವಾರ ಮಹತ್ವದ ತೀರ್ಪಿತ್ತಿದೆ.
ಆರೋಪಿಗಳಿಗೆ ಶಿಕ್ಷೆಯ ಪ್ರಮಾಣ ಕಾಯ್ದಿರಿಸಲಾಗಿದ್ದು, ಎಪ್ರಿಲ್ 4 ರಂದು ಶಿಕ್ಷೆಯ ಪ್ರಮಾಣ ಪ್ರಕಟಿಸುವುದಾಗಿ ನ್ಯಾಯಾಧೀಶ ಸಿ.ಎಂ ಜೋಶಿ ತಿಳಿಸಿದ್ದಾರೆ.
ಆರ್.ಎನ್.ನಾಯಕ್ ಕೊಲೆ ಪ್ರಕರಣದ 6, 11 ಹಾಗೂ 16 ನೇ ಆರೋಪಿಗಳು ನಿರ್ದೋಷಿ ಎಂದು ನ್ಯಾಯಾಲಯ ಪ್ರಕಟಿಸಿದೆ. 6ನೇ ಆರೋಪಿ ಕೇರಳದ ರಬ್ದಿನ್ ಫಿಚೈ, 11 ನೇ ಆರೋಪಿ ಬೆಂಗಳೂರಿನ ಮಹ್ಮದ್ ಶಾಬಂದರಿ ಹಾಗೂ 16 ನೇ ಆರೋಪಿ ಉತ್ತರ ಕನ್ನಡದ ಆನಂದ ರಮೇಶ್ ‌ನಾಯಕ ಅವರಾಗಿದ್ದು ಪ್ರಕರಣದಲ್ಲಿ ದೋಷಮುಕ್ತರಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!