ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಂದ್ರಾ ರೈಲು ನಿಲ್ದಾಣದಲ್ಲಿ ನೂಕುನುಗ್ಗಲು ಉಂಟಾಗಿ ಒಂಬತ್ತು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ಉತ್ತರ ಪ್ರದೇಶದ ಗೋರಖ್‌ಪುರಕ್ಕೆ ರೈಲು ಹತ್ತಲು ಪ್ರಯಾಣಿಕರು ಪ್ರಯತ್ನಿಸುತ್ತಿದ್ದಾಗ ನೂಕುನುಗ್ಗಲು ಉಂಟಾಗಿದೆ ಪರಿಣಾಮವಾಗಿ ಏಳು ಮಂದಿ ಗಾಯಾಳುಗಳ ಸ್ಥಿತಿ ಸ್ಥಿರವಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.
ದೀಪಾವಳಿ ಹಬ್ಬದ ಪ್ರಯುಕ್ತ ಉತ್ತರ ಪ್ರದೇಶಕ್ಕೆ ತೆರಳುವ ರೈಲು ಹತ್ತುವಾಗ ಕಾಲ್ತುಳಿತ ಸಂಭವಿಸಿದೆ ಎಂದು ಬೃಹತ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ತಿಳಿಸಿದೆ.