ನಾಲ್ಕು ಅಂತಸ್ತಿನ ಕಟ್ಟಡ ಕುಸಿತ: 9 ವರ್ಷದ ಬಾಲಕಿ ಸೇರಿ ನಾಲ್ವರ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದೆಹಲಿಯ ಬವಾನಾ ಪ್ರದೇಶದಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು 9 ವರ್ಷದ ಬಾಲಕಿ ಸೇರಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಸ್ಥಳಿಯ ಪೊಲೀಸ್‌ ಅಧಿಕಾರಿಗಳು. ಬವಾನಾ ಪ್ರದೇಶದಲ್ಲಿ ಸಂಭವಿಸಿದ ಕಟ್ಟಡ ಕುಸಿತದಲ್ಲಿ ಮೃತಪಟ್ಟ ನಾಲ್ವರನ್ನು ಜೆ.ಜೆ. ಕಾಲೋನಿಯ ರುಕಯ್ಯ ಖಾತೂನ್‌, ಶಹಜಾದ್ಮ ಅಫ್ರೀನ್‌ ಮತ್ತು ದಾನಿಶ್‌ ಎಂದು ಗುರುತಿಸಲಾಗಿದೆ. ಇನ್ನು ಈ ವೇಳೆ ಗಾಯಗೊಂಡ ಇಬ್ಬರನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದರು.
ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಇಬ್ಬರನ್ನು ರಕ್ಷಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಗೆ ಮೂರು ಜೆಸಿಬಿ, ಒಂದು ಹೈಡ್ರಾ ಮತ್ತು ಎರಡು ಆಂಬುಲೆನ್ಸ್‌ ಭಾಗಿಯಾಗಿದ್ದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!