Wednesday, March 29, 2023

Latest Posts

ಮಂಗಳೂರು ವಿಮಾನ ನಿಲ್ದಾಣದಲ್ಲಿ ದುಬೈಯಿಂದ ಸಾಗಿಸುತ್ತಿದ್ದ 90 ಲಕ್ಷ ರೂ. ಮೌಲ್ಯದ ಚಿನ್ನ ವಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನ ಕಾರ್ಯಾಚರಣೆ ಮುಂದುವರಿದಿದೆ. ಜನವರಿ 19 ರಿಂದ 31 ರವರೆಗೆ ತೆರಿಗೆ ವಂಚಿಸಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ ಐದು ಪ್ರಕರಣವನ್ನು ಪತ್ತೆಹಚ್ಚಿರುವ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಆರೋಪಿಗಳಿಂದ 90,34, 970 ರೂ. ಮೌಲ್ಯದ 1617 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ದುಬೈಯಿಂದ ವಿಮಾನದ ಮೂಲಕ ಆಗಮಿಸಿರುವ ಆರೋಪಿಗಳು ಅನುಮಾನ ಬಾರದಂತೆ ಟ್ರಾಲಿ ಬ್ಯಾಗ್‌ನ ಬೀಡಿಂಗ್ ಸೇರಿದಂತೆ ದೇಹದ ವಿವಿಧ ಭಾಗಗಳಲ್ಲಿ ಚಿನ್ನವನ್ನು ಬಚ್ಚಿಟ್ಟು ಸಾಗಾಟ ಮಾಡುತ್ತಿದ್ದರು. ಆದರೆ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳ ತಪಾಸಣೆ ವೇಳೆ ಸಿಕ್ಕಿಬಿದ್ದಿದ್ದಾರೆ. ಓರ್ವ ಪ್ರಯಾಣಿಕನಿಂದ 6 ಲಕ್ಷ 42 ಸಾವಿರದ 740 ರೂಪಾಯಿ ಮೌಲ್ಯದ ಸಿಗರೇಟ್ ಮತ್ತು ಇ-ಸಿಗರೇಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಎಲ್ಲಾ ಪ್ರಕರಣಗಳ ತನಿಖೆ ನಡೆಯುತ್ತಿದೆ ಎಂದು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!