ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತಗೊಂಡಿದೆ. ಕಳೆದ 24 ಗಂಟೆಯಲ್ಲಿ 92 ಜನರಲ್ಲಿ ಮಾತ್ರ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಇದು ಕಳೆದ ನಾಲ್ಕು ತಿಂಗಳಲ್ಲಿಯೇ ಅತಿ ಕಡಿಮೆ ಸಂಖ್ಯೆಯಲ್ಲಿ ಪತ್ತೆಯಾದ ಪ್ರಕರಣಗಳಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.
ದೇಶದಲ್ಲಿ ಈವರೆಗೆ 531891 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ಕೋವಿಡ್ ಸಕ್ರಿಯ ಪ್ರಕರಣಗಳು ಕಡಿಮೆಯಾಗಿದ್ದು, ದೇಶದಲ್ಲಿ 2350 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಈವರೆಗೆ 44458639 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 157 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,67,30,771 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 31,616 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ.