ನವದೆಹಲಿ : ಬಿಜೆಪಿ ಹಿರಿಯ ನಾಯಕ ಎಲ್. ಕೆ. ಅಡ್ವಾಣಿ ಇಂದು 93 ನೇ ಜನ್ಮ ದಿನವನ್ನು ಆಚರಿಸುತ್ತಿದ್ದಾರೆ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಶುಭ ಕೋರಿದ್ದಾರೆ.
ಈ ಕುರಿತಂತೆ ಹಿಂದಿಯಲ್ಲಿ ಟ್ವೀಟ್ ಮಾಡಿರುವ ನರೇಂದ್ರ ಮೋದಿ, ಬಿಜೆಪಿ ಪಕ್ಷವನ್ನು ಜನಮಾನಸದ ಪಕ್ಷವಾಗಿ ಬೆಳಸಿದ ಎಲ್ಕೆ ಅಡ್ವಾಣಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಕೋಟ್ಯಂತರ ಕಾರ್ಯಕರ್ತರು ಮತ್ತು ದೇಶವಾಸಿಗಳ ಪಾಲಿಗೆ ಅವರು ಜೀವಂತ ಪ್ರೇರಣಾದಾಯಿಗಳು.ಅವಿರತವಾಗಿ ದೇಶ ಸೇವೆ ಸಲ್ಲಿಸುತ್ತಿರುವ ನಾಯಕ ಎಲ್ಕೆ ಅಡ್ವಾಣಿ ಹಾಕಿಕೊಟ್ಟ ದಾರಿಯಲ್ಲಿ ನಾವೆಲ್ಲಾ ಸಾಗಿ ದೇಶಸೇವೆ ಮಾಡುಬೇಕು. ಅವರಿಗೆ ಸುದೀರ್ಘ ಆಯುರಾರೋಗ್ಯವನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ಹೇಳಿದ್ದಾರೆ.
भाजपा को जन-जन तक पहुंचाने के साथ देश के विकास में अहम भूमिका निभाने वाले श्रद्धेय श्री लालकृष्ण आडवाणी जी को जन्मदिन की बहुत-बहुत बधाई। वे पार्टी के करोड़ों कार्यकर्ताओं के साथ ही देशवासियों के प्रत्यक्ष प्रेरणास्रोत हैं। मैं उनकी लंबी आयु और स्वस्थ जीवन की प्रार्थना करता हूं।
— Narendra Modi (@narendramodi) November 8, 2020