ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶವಿರೋಧಿ ಶಕ್ತಿಗಳ ವಿರುದ್ಧ ಸರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ ಮತ್ತು ಇದರ ಪರಿಣಾಮವಾಗಿ 2021 ಮತ್ತು 2022ರಲ್ಲಿ 94 ಯೂಟ್ಯೂಬ್ ಚಾನೆಲ್‌ಗಳು
ಮತ್ತು 19 ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಲಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಗುರುವಾರ ಹೇಳಿದ್ದಾರೆ.
ಅಧಿವೇಶನದ ಸಂದರ್ಭದಲ್ಲಿ ರಾಜ್ಯಸಭೆಗೆ ವಿಷಯ ತಿಳಿಸಿದ ಅವರು ” 2021-22ರಲ್ಲಿ ಸುಮಾರು 94 ಯೂಟ್ಯೂಬ್ ಚಾನೆಲ್‌ಗಳು, 19 ಸಾಮಾಜಿಕ ಮಾಧ್ಯಮ ಖಾತೆಗಳು ಮತ್ತು 747 ಯುಆರ್‌ಎಲ್‌ಗಳನ್ನು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಮುಚ್ಚಿದೆ. ಭಾರತದ ವಿರುದ್ಧ ಅಪಪ್ರಚಾರ ಮಾಡುವ ದೇಶವಿರೋಧಿ ಶಕ್ತಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ” ಎಂದು ತಿಳಿಸಿದ್ದಾರೆ.
ಇದಕ್ಕೂ ಪೂರ್ವದಲ್ಲಿ ಸಚಿವ ಅನುರಾಗ್ ಠಾಕುರ್ ಅವರು ಲೋಕಸಭೆಗೆ ನೀಡಿದ ಲಿಖಿತ ಉತ್ತರವೊಂದರಲ್ಲಿ ಯೂಟ್ಯೂಬ್ ಚಾನೆಲ್‌ಗಳು ಮತ್ತು ಯುಆರ್‌ಎಲ್‌ಗಳನ್ನು ನಿರ್ಬಂಧಿಸಲು ಕೇಂದ್ರವು 600ಕ್ಕೂ ಹೆಚ್ಚು ರಿಕ್ವೆಸ್ಟ್‌ಗಳನ್ನು ಕಳುಹಿಸಿದೆ. ಒಟ್ಟಾರೆಯಾಗಿ, ಮಾಹಿತಿ ಮತ್ತು ಪ್ರಸಾರ ಸಚಿವಾಲಯವು 78 ಯೂಟ್ಯೂಬ್ ಆಧಾರಿತ ಸುದ್ದಿ ಚಾನೆಲ್‌ಗಳು ಮತ್ತು ಅವುಗಳ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಲು ನಿರ್ದೇಶನಗಳನ್ನು ನೀಡಿದೆ ಎಂದು ಹೇಳಿದರು.
ಹೊಸ ಐಟಿ ನಿಯಮ 2021ರ ಅನ್ವಯ ಕ್ಯಾಬಿನೆಟ್ ಮೀಟಿಂಗ್ ನಕಲಿ ವಿಡಿಯೊಗಳನ್ನು ಪ್ರಸಾರ ಮಾಡಿದ್ದಕ್ಕಾಗಿ ಜನವರಿ 2022ರಲ್ಲಿ ಸಚಿವಾಲಯವು 73 ಟ್ವಿಟರ್ ಹ್ಯಾಂಡಲ್‌ಗಳನ್ನು ಅಮಾನತ್ತು ಗೊಳಿಸಿತ್ತು. ಅದರ ಹಿಂದೆಯೇಈ ಬೆಳವಣಿಗೆ ನಡೆದಿದೆ. ಅದಕ್ಕೂ ಮೊದಲು, ಡಿಸೆಂಬರ್ ನಲ್ಲಿ ಭಾರತ ವಿರೋಧಿ ವಿಷಯವನ್ನು ನಿರಂತರ ಪ್ರಸಾರ ಮಾಡುತ್ತಿದ್ದ ಎರಡು ಸುದ್ದಿ ವೆಬ್‌ಸೈಟ್‌ಗಳು ಮತ್ತು 20 ಯೂಟ್ಯೂಬ್ ಚಾನೆಲ್‌ಗಳನ್ನು ಸಚಿವಾಲಯ ನಿಷೇಧಿಸಿತ್ತು.