ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಲು ಜಾರಿ 60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ವೃದ್ಧೆಯನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ ಘಟನೆ ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಮರಕಟ್ಟೆ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಕಮಲ ಎಂಬ ವೃದ್ಧೆ ಕಾಲು ಜಾರಿ ಬಾವಿಗೆ ಬಿದ್ದಿದ್ದರು. ನೀರಿನಲ್ಲಿ ಮುಳುಗದಂತೆ ಬಾವಿಯೊಳಗೆ ಪೈಪ್ ಹಿಡಿದುಕೊಂಡು ಒಂದು ಗಂಟೆಗೂ ಹೆಚ್ಚು ಕಾಲ ಅವರು ಸಾವು ಬದುಕಿನ ನಡುವೆ ಹೋರಾಡಿದ್ದಾರೆ. ಬಳಿಕ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದೆ. ತಕ್ಷಣ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ವೃದ್ಧೆಯನ್ನು ರಕ್ಷಿಸಿದ್ದಾರೆ.
ಹಗ್ಗದ ಸಹಾಯದಿಂದ ಅಗ್ನಿಶಾಮಕ ಸಿಬ್ಬಂದಿ ವಿಶ್ವನಾಥ ಅವರು ವೃದ್ಧೆಯನ್ನು ಮೇಲೆತ್ತಿದ್ದಾರೆ.