ಬೀಗರ ಊಟ ಸೇವಿಸಿ 22 ಮಕ್ಕಳು ಸೇರಿದಂತೆ, 96 ಮಂದಿಯ ಸ್ಥಿತಿ ತೀವ್ರ ಗಂಭೀರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೀಗರ ಊಟ ತಿಂದ 96 ಮಂದಿ ವಾಂತಿ ಭೇದಿಯಿಂದ ಅಸ್ವಸ್ಥರಾಗಿರುವ ಘಟನೆ ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಸಿಂಗ್ರಿಹಳ್ಳಿಯಲ್ಲಿ ನಡೆದಿದೆ.

ಸಿಂಗ್ರಿಹಳ್ಳಿಯಲ್ಲಿ ಬೀಗರ ಊಟ ಸೇವಿಸಿದ 22 ಮಕ್ಕಳು ಸೇರಿದಂತೆ 96 ಮಂದಿ ವಾಂತಿ, ಭೇದಿಯಿಂದ ಬಳಲುತ್ತಿದ್ದರು. ಅಸ್ವಸ್ಥರನ್ನು ಚಿಕಿತ್ಸೆಗಾಗಿ ದಾವಣಗೆರೆಯ ಚಿಗಟೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹರಪನಹಳ್ಳಿ ಶಾಸಕಿ ಲತಾ ಮಲ್ಲಿಕಾರ್ಜುನ್ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶಂಕರ ನಾಯ್ಕ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಆರೋಗ್ಯ ವಿಚಾರಿಸಿ ಮಾಹಿತಿ ಪಡೆದುಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!