Sunday, June 26, 2022

Latest Posts

ಮುಂದಿನ ಮೂರು ದಿನಗಳಲ್ಲಿ 96,490 ಡೋಸ್‌ ಕೊರೋನಾ ಲಸಿಕೆ ಪೂರೈಕೆ: ಆರೋಗ್ಯ ಸಚಿವಾಲಯ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಮುಂದಿನ ಮೂರು ದಿನಗಳಲ್ಲಿ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ 96,490 ಡೋಸ್‌ ಕೊರೋನಾ ಲಸಿಕೆಗಳನ್ನು ಪೂರೈಸಲಾಗುತ್ತದೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಘೋಷಿಸಿದೆ.
ಸದ್ಯಕ್ಕೆ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಬಳಿ 1,40,70,224 ಡೋಸ್‌ಗಳ ಲಸಿಕೆಗಳು ಲಭ್ಯವಿದ್ದು, ಇದುವರೆಗೂ ಕೇಂದ್ರ 26,68,36,62 ಡೋಸ್‌ಗಳನ್ನು ಉಚಿತವಾಗಿ ಪೂರೈಸಿದೆ ಎಂದು ಮಾಹಿತಿ ನೀಡಿದೆ.
ಇನ್ನು ವ್ಯರ್ಥವಾಗಿರುವ ಲಸಿಕೆಗಳೂ ಸೇರಿದಂತೆ 25,27,66,396 ಡೋಸ್‌ಗಳ ಲಸಿಕೆಗಳನ್ನು ಬಳಸಿಕೊಳ್ಳಲಾಗಿದೆ ಎಂದು ತಿಳಿಸಿದೆ. ಲಸಿಕೆ ಅಭಿಯಾನ ಆರಂಭವಾದಾಗಿನಿಂದ ಇದುವರೆಗೂ 25,48,49,301 ಡೋಸ್‌ಗಳ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಮಾಹಿತಿ ನೀಡಿದೆ.
ಜನವರಿ 16ರಿಂದ ದೇಶದಲ್ಲಿ ಲಸಿಕಾ ಅಭಿಯಾನ ಆರಂಭವಾಗಿದ್ದು, ಹಂತ ಹಂತಗಳಲ್ಲಿ ಅಭಿಯಾನ ನಡೆಯುತ್ತಿದೆ. ಕೋವಿಶೀಲ್ಡ್, ಕೋವ್ಯಾಕ್ಸಿನ್ ಹಾಗೂ ಸ್ಫುಟ್ನಿಕ್ ವಿ ಲಸಿಕೆಗೆ ದೇಶದಲ್ಲಿ ಅನುಮೋದನೆ ನೀಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss