ಪಾನಿಪೂರಿ ಸೇವಿಸಿ 97ಮಕ್ಕಳು ಅಸ್ವಸ್ಥ, ಆಸ್ಪತ್ರೆಯಲ್ಲಿ ಚಿಕಿತ್ಸೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪಾನಿಪೂರಿ ಎಂದರೆ ಯಾರಿಗೆ ತಾನೆ ಇಷ್ಟ ಇಲ್ಲ ಹೇಳಿ. ಪುಟ್ಟ ಮಕ್ಕಳಿಂದ ಹಿಡಿದು ಹಿರಯವರೆಗೆ ಎಲ್ಲರೂ ಪಾನಿಪೂರಿ ಆಸ್ವಾದಿಸುತ್ತಾರೆ. ರಸ್ತೆ ಬದಿ, ಶಾಪಿಂಗ್‌ ಮಾಲ್‌, ಚಾಟ್ಸ್‌ ಸೆಂಟರ್‌ ಹೀಗೆ ಎಲ್ಲಾ ಕಡೆ ಪಾನಿಪೂರಿ ಲಭ್ಯವಿರುತ್ತದೆ. ಇದನ್ನೇ ಬಂಡವಾಳ ಮಡಿಕೊಂಡ ಕೆಲ ಪಾನಿಪೂರಿ ತಯಾರಕರು ನಿರ್ಲಕ್ಷ್ಯ ವಹಿಸಿ ಜನರ ಜೀವದ ಜೊತೆ ಚಲ್ಲಾಟ ಆಡುತ್ತಾರೆ. ಕಲುಷಿತ ನೀರು ಮತ್ತು ಪದಾರ್ಥಗಳೊಂದಿಗೆ ಪಾನಿಪೂರಿ ತಯಾರಿಸಿ ಜನರು ಆಸ್ಪತ್ರೆಗೆ ದಾಖಲಾಗುವಂತೆ ಮಾಡುತ್ತಿದ್ದಾರೆ. ಈ ಸಾಲಿಗೆ ನಿನ್ನೆ ರಾತ್ರಿ ಮಧ್ಯಪ್ರದೇಶದಲ್ಲಿ ನಡೆದ ಘಟನೆಯೂ ಒಂದು.

ರಾಜ್ಯದ ಬುಡಕಟ್ಟು ಜನಾಂಗದ ಪ್ರಾಬಲ್ಯದ ಸಿಂಗ್ಲಾಪುರ ಜಿಲ್ಲೆಯಲ್ಲಿ ಶನಿವಾರ ರಾತ್ರಿ ಜಾತ್ರೆಯ ಸಂದರ್ಭದಲ್ಲಿ ಒಂದೇ ಅಂಗಡಿಯಲ್ಲಿ ಪಾನಿಪೂರಿ ತಿಂದ 97 ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಮಕ್ಕಳು ಫುಡ್ ಪಾಯ್ಸನ್ ನಿಂದ ಬಳಲುತ್ತಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು  ಮಧ್ಯಪ್ರದೇಶದ ವೈದ್ಯಕೀಯ ಅಧಿಕಾರಿಗಳು ಭಾನುವಾರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಪಾನಿಪೂರಿ ತಿಂದ ಬಳಿಕ ಎಲ್ಲಾ ಮಕ್ಕಳು ವಾಂತಿ ಮತ್ತು ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಕೂಡಲೇ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸದ್ಯ ಎಲ್ಲರಿಗೂ ವೈದ್ಯರು ಚಿಕಿತ್ಸೆ ನೀಡಿದ್ದು, ಮಕ್ಕಳು ಚೇತರಿಸಿಕೊಳ್ಳುತ್ತಿದ್ದಾರೆ ಎಂದರು. ಪಾನಿಪುರಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಪಾನಿಪೂರಿಯ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ. ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here