ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಶಾಲೆಗೆ ತೆರಬೇಕಿದ್ದ ಬಸ್ ತಪ್ಪಿತೆಂದು ಮನನೊಂದ ವಿದ್ಯಾರ್ಥಿಯೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ಮಧ್ಯಪ್ರದೇಶದ ಬೆತುಲ್ ಜಿಲ್ಲೆಯಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಈ ವಿದ್ಯಾರ್ಥಿ ಖಾಸಗಿ ಶಾಲೆಯಲ್ಲಿ 9ನೇ ತರಗತಿಯಲ್ಲಿ ಓದುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪೋಷಕರು ನೀಡಿರುವ ಮಾಹಿತಿ ಪ್ರಕಾರ, “ಈತ ಓದಿನಲ್ಲಿ ಮುಂದಿದ್ದ. ಒಂದು ದಿನವೂ ಶಾಲೆ ತಪ್ಪಿಸುತ್ತಿರಲಿಲ್ಲ. ಶಾಲೆಗೆ ಹೋಗುವ ಬಸ್ ತಪ್ಪಿದ್ದರಿಂದ ತೀವ್ರವಾಗಿ ಮನನೊಂದು ಕಣ್ಣೀರು ಹಾಕುತ್ತ ಮನೆಗೆ ಬಂದಿದ್ದ. ನಂತರ ಮನೆಯ ಹಿಂದಿರುವ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ” ಎಂದು ತಿಳಿಸಿದ್ದಾರೆ
ಈ ಪ್ರಕಣದ ಕುರಿತು ಆಮ್ಧೋಹ್ ಗ್ರಾಮದ ಘೋಡಾಡೋಂಗ್ರಿ ಪೋಲಿಸ್ ಪೋಸ್ಟ್ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.