October 14, 2026
Wednesday, October 14, 2026
spot_img

ವಿಶ್ವದ ಅತಿ ದೊಡ್ಡ ಕಂಪನಿಯನ್ನು ಟಾರ್ಗೆಟ್‌ ಮಾಡಿದ ಹೌತಿ : ʼಅರಾಮ್ಕೊʼ ಮೇಲೆ ಕ್ಷಿಪಣಿ ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಇರಾನ್‌ ಬೆಂಬಲಿತ ಹೌತಿ ಬಂಡುಕೋರರು ಮತ್ತು ಸೌದಿ ಅರೇಬಿಯಾ ನೇತೃತ್ವದ ಸಮ್ಮಿಶ್ರ ಪಡೆಗಳ ನಡುವೆ ಭೀಕರ ಯುದ್ಧ ಆರಂಭವಾಗಿದ್ದು, ವಿಶ್ವದ ಅತಿ ದೊಡ್ಡ ತೈಲ ಕಂಪನಿ ಅರಾಮ್ಕೊ ಆಡಳಿತ ಕಟ್ಟಡದ ಮೇಲೆ ಹೌತಿಗಳು ಕ್ಷಿಪಣಿ ದಾಳಿ ನಡೆಸಿವೆ.

ಸೌದಿಯ ಪೂರ್ವ ಪ್ರಾಂತ್ಯದಲ್ಲಿರುವ ಅರಾಮ್ಕೊ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್‌ ದಾಳಿಯ ಸಂದರ್ಭದಲ್ಲಿ ಜನರು ಕಂಪನಿಯ ಒಳಗೆ ಇರಲಿಲ್ಲ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಆಗಿಲ್ಲ ಎಂದು ಸೌದಿ ಇಂಧನ ಸಚಿವಾಲಯ ತಿಳಿಸಿದೆ.

ಇದಕ್ಕೆ ತೀವ್ರ ಪ್ರತ್ಯುತ್ತರ ನೀಡಿರುವ ಸೌದಿ ನೇತೃತ್ವದ ಸಮ್ಮಿಶ್ರ ಪಡೆಗಳು, ಯೆಮನ್‌ನ ರಾಜಧಾನಿ ಸನಾ ಸೇರಿದಂತೆ ಹೌತಿ ನಿಯಂತ್ರಿತ ಪ್ರದೇಶಗಳ ಮೇಲೆ ಮಂಗಳವಾರ ರಾತ್ರಿ ವಾಯುದಾಳಿ ನಡೆಸಿವೆ.ಸೌದಿ ರಾಜಧಾನಿ ರಿಯಾದ್ ಮತ್ತು ಪೂರ್ವ ಪ್ರಾಂತ್ಯವನ್ನು ಗುರಿಯಾಗಿಸಿಕೊಂಡು ಹೌತಿಗಳು ಉಡಾಯಿಸಿದ್ದ ಬ್ಯಾಲಿಸ್ಟಿಕ್ ಕ್ಷಿಪಣಿಗಳು, ಡ್ರೋನ್ ಹಾಗೂ ಕ್ರೂಸ್ ಕ್ಷಿಪಣಿಗಳನ್ನು ಸೌದಿ ವಾಯು ರಕ್ಷಣಾ ಪಡೆಗಳು ಹೊಡೆದುರುಳಿಸಿವೆ. ಆದರೆ, ರಿಯಾದ್‌ನ ಜನವಸತಿ ಪ್ರದೇಶಗಳಲ್ಲಿ ಕ್ಷಿಪಣಿಗಳ ಅವಶೇಷಗಳು ಬಿದ್ದ ಪರಿಣಾಮ ನಾಲ್ವರು ಗಾಯಗೊಂಡಿದ್ದು, 15ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ ಎಂದು ನಾಗರಿಕ ರಕ್ಷಣಾ ಇಲಾಖೆ ತಿಳಿಸಿದೆ.

Must Read