October 15, 2026
Thursday, October 15, 2026
spot_img

ಕೃಷ್ಣಾ ನದಿಯ ಅಪಾಯ ಸ್ಥಳದಲ್ಲಿ ಈಜಲು ತೆರಳಿದ್ದ ಯುವಕ ನೀರುಪಾಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕೃಷ್ಣಾ ನದಿಯ ಅಪಾಯ ಸ್ಥಳದಲ್ಲಿ ಈಜಲು ತೆರಳಿದ್ದ ಯುವಕನೊಬ್ಬ ನೀರುಪಾಲಾಗಿರುವ ಘಟನೆ ರಾಯಚೂರಿನ ದೇವಸುಗೂರು ಬಳಿ ನಡೆದಿದೆ.

ಜಾರ್ಖಂಡ್ ಮೂಲದ 20 ವರ್ಷದ ಸುನಿಲ್ ಪಹಾಡಿಯಾ ಮೃತ ದುರ್ದೈವಿ. ಖಾಸಗಿ ಫಾರ್ಮಾ ಕಂಪನಿಯಲ್ಲಿ ಹೆಲ್ಪರ್ ಕೆಲಸದಲ್ಲಿದ್ದ ಸುನಿಲ್ ತನ್ನ ಸ್ನೇಹಿತನ ಜೊತೆ ಈಜಲು ಕೃಷ್ಣಾ ನದಿ ಸೇತುವೆ ಬಳಿ ಹೋಗಿದ್ದಾಗ ದುರ್ಘಟನೆ ನಡೆದಿದೆ.

ಅಗ್ನಿ ಶಾಮಕದಳ ಹಾಗೂ ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ನದಿಯಿಂದ ಶವ ಹೊರತೆಗೆದಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ರಿಮ್ಸ್ ಆಸ್ಪತ್ರೆಗೆ ಶವ ರವಾನಿಸಲಾಗಿದೆ. ಘಟನೆ ಸಂಬಂಧ ಶಕ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Must Read