ಬೇಕಾಗುವ ಸಾಮಗ್ರಿಗಳು:
ಅಕ್ಕಿ
ಹೆಸರುಬೇಳೆ
ಕಾರ್ನ್
ಪಾಲಕ್ ಸೊಪ್ಪು
ಈರುಳ್ಳಿ, ಟೊಮೆಟೊ
ಹಸಿಮೆಣಸಿನಕಾಯಿ, ಬೆಳ್ಳುಳ್ಳಿ
ಎಣ್ಣೆ
ಜೀರಿಗೆ, ಇಂಗು, ಅರಿಶಿಣ, ಖಾರದ ಪುಡಿ, ಗರಂ ಮಸಾಲಾ, ಉಪ್ಪು
ಮಾಡುವ ವಿಧಾನ
ಮೊದಲು ಅಕ್ಕಿ ಮತ್ತು ಹೆಸರುಬೇಳೆಯನ್ನು ಚೆನ್ನಾಗಿ ತೊಳೆದು 15-20 ನಿಮಿಷಗಳ ಕಾಲ ನೀರಿನಲ್ಲಿ ನೆನೆಸಿಡಿ. ತೊಳೆದ ಪಾಲಕ್ ಸೊಪ್ಪನ್ನು ಬಿಸಿ ನೀರಲ್ಲಿ 2 ನಿಮಿಷ ಬೇಯಿಸಿ, ತಣ್ಣಗಾದ ಬಳಿಕ ಮಿಕ್ಸಿಯಲ್ಲಿ ನುಣ್ಣಗೆ ರುಬ್ಬಿಕೊಳ್ಳಿ. ಕುಕ್ಕರ್ನಲ್ಲಿ 2 ಚಮಚ ಎಣ್ಣೆ ಹಾಕಿ ಬಿಸಿ ಮಾಡಿ. ಜೀರಿಗೆ, ಇಂಗು, ಹೆಚ್ಚಿದ ಈರುಳ್ಳಿ ಮತ್ತು ಹಸಿಮೆಣಸಿನಕಾಯಿ ಹಾಕಿ ಗೋಲ್ಡನ್ ಬ್ರೌನ್ ಬರುವವರೆಗೆ ಹುರಿಯಿರಿ. ನಂತರ ಟೊಮೆಟೊ ಹಾಕಿ ಮೆದುವಾಗುವವರೆಗೆ ಬಾಡಿಸಿ. ಈಗ ಕಾರ್ನ್ ಹಾಕಿ 2 ನಿಮಿಷ ಎಣ್ಣೆಯಲ್ಲಿ ಫ್ರೈ ಮಾಡಿ. ಇದರೊಂದಿಗೆ ಅರಿಶಿಣ, ಖಾರದ ಪುಡಿ ಮತ್ತು ಗರಂ ಮಸಾಲಾ ಸೇರಿಸಿ. ರುಬ್ಬಿಕೊಂಡ ಪಾಲಕ್ ಪ್ಯೂರಿ, ನೆನೆಸಿಟ್ಟ ಅಕ್ಕಿ-ಬೇಳೆ ಮಿಶ್ರಣ, ರುಚಿಗೆ ತಕ್ಕಷ್ಟು ಉಪ್ಪು ಮತ್ತು ಅಗತ್ಯವಿರುವಷ್ಟು ನೀರು ಸೇರಿಸಿ ಚೆನ್ನಾಗಿ ಕಲಸಿ. ಕುಕ್ಕರ್ ಮುಚ್ಚಳ ಮುಚ್ಚಿ, ಮಧ್ಯಮ ಉರಿಯಲ್ಲಿ 3 ರಿಂದ 4 ವಿಸಿಲ್ ಕೂಗಿಸಿ. ಕುಕ್ಕರ್ ತಣ್ಣಗಾದ ಬಳಿಕ ಚೆನ್ನಾಗಿ ಮಿಕ್ಸ್ ಮಾಡಿ. ಈಗ ಬಿಸಿಬಿಸಿಯಾದ ಕಾರ್ನ್ ಪಾಲಕ್ ಕಿಚಡಿ ಸವಿಯಲು ಸಿದ್ಧ!



