ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಸಂಜೆ ವರುಣನ ಆರ್ಭಟ ಜೋರಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮೆಜೆಸ್ಟಿಕ್, ಜಯನಗರ ಹಾಗೂ ವಿಧಾನಸೌಧದ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾರೀ ಮಳೆ ಸುರಿದಿದ್ದು, ಕಚೇರಿ ಮುಗಿಸಿ ಮನೆಗೆ ಮರಳುತ್ತಿದ್ದ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ.
ನಗರದ ಎಲ್ಲೆಡೆ ವರುಣನ ಅಬ್ಬರ
ಮೆಜೆಸ್ಟಿಕ್, ಟೌನ್ ಹಾಲ್, ಕೆ.ಆರ್. ಮಾರ್ಕೆಟ್, ಜಯನಗರ, ಶೇಷಾದ್ರಿಪುರಂ, ವಿಧಾನಸೌಧದ ಸುತ್ತಮುತ್ತ, ಮಲ್ಲೇಶ್ವರಂ, ರಾಜಾಜಿನಗರ, ಮೈಸೂರು ಬ್ಯಾಂಕ್ ಸರ್ಕಲ್ ಹಾಗೂ ಕಾರ್ಪೊರೇಷನ್ ಸೇರಿದಂತೆ ಬೆಂಗಳೂರಿನ ಮಧ್ಯಭಾಗದ ಬಹುತೇಕ ಎಲ್ಲಾ ವಲಯಗಳಲ್ಲೂ ಮಳೆರಾಯ ಅಬ್ಬರಿಸಿದ್ದಾನೆ. ಇದರೊಂದಿಗೆ ಲಾಲ್ ಬಾಗ್, ವಿ.ವಿ. ಪುರಂ, ಬಸವನಗುಡಿ, ಗಾಂಧಿ ಬಜಾರ್, ಸೌತ್ ಎಂಡ್ ಸರ್ಕಲ್ ಮತ್ತು ಬಸಪ್ಪ ಸರ್ಕಲ್ ಭಾಗಗಳಲ್ಲೂ ಮಳೆ ಸುರಿಯುತ್ತಿದೆ.
ಇದನ್ನೂ ಓದಿ:
ಕಿ.ಮೀ ಗಟ್ಟಲೆ ಟ್ರಾಫಿಕ್ ಜಾಮ್
ದಿಢೀರ್ ಸುರಿದ ಮಳೆಯಿಂದಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ನೀರು ನಿಂತಿದ್ದು, ಬೈಕ್ ಸವಾರರು ಮತ್ತು ಪಾದಚಾರಿಗಳು ಪರದಾಡುತ್ತಿದ್ದಾರೆ. ಬಿಡುವಿಲ್ಲದ ವಾಹನ ಸಂಚಾರದ ನಡುವೆಯೇ ಮಳೆ ಸುರಿಯುತ್ತಿರುವುದರಿಂದ ವಾಹನಗಳ ವೇಗಕ್ಕೆ ಬ್ರೇಕ್ ಬಿದ್ದಿದ್ದು, ಪ್ರಮುಖ ರಸ್ತೆಗಳಲ್ಲಿ ಕಿ ಕಿ.ಮೀ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದೆ. ಮಳೆಯ ನಡುವೆಯೂ ವಾಹನ ಸಂಚಾರವನ್ನು ಸುಗಮಗೊಳಿಸಲು ಸಂಚಾರಿ ಪೊಲೀಸರು ರಸ್ತೆಗಿಳಿದು ಹರಸಾಹಸ ಪಡುತ್ತಿದ್ದಾರೆ.



