October 16, 2026
Friday, October 16, 2026
spot_img

WEATHER | ಮತ್ತೆ ಚುರುಕಾದ ಮಳೆರಾಯ: ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ದಿನ ಭಾರೀ ಮಳೆ ಎಚ್ಚರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಮಳೆಯ ಅಬ್ಬರ ಮತ್ತೆ ಹೆಚ್ಚಾಗುವ ಮುನ್ಸೂಚನೆ ದೊರೆತಿದೆ. ಮುಂದಿನ ಮೂರು ದಿನಗಳಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ವಿಶೇಷವಾಗಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದೆ.

ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ

ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ. ಗುಡುಗು ಮತ್ತು ಮಿಂಚಿನೊಂದಿಗೆ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ಹೊರಾಂಗಣ ಚಟುವಟಿಕೆಗಳಲ್ಲಿ ಎಚ್ಚರಿಕೆ ವಹಿಸುವುದು ಸೂಕ್ತ.

ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಸಾಧ್ಯತೆ

ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಅಕ್ಟೋಬರ್ 16ರಂದು ಭಾರೀ ಅಥವಾ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿಯೂ ಭಾರೀ ಮಳೆಯ ಮುನ್ಸೂಚನೆ ಇದೆ.

ಬೆಂಗಳೂರಿಗೂ ಮಳೆ ಎಚ್ಚರಿಕೆ

ಅಕ್ಟೋಬರ್ 17ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ಮಂಡ್ಯ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ.

Must Read