October 17, 2026
Saturday, October 17, 2026
spot_img

ಅಪೋಲೋದಲ್ಲಿ ಅಡ್ವಾಣಿ: ಹಿರಿಯ ನಾಯಕನ ಆರೋಗ್ಯದ ಬಗ್ಗೆ ಏನಂದ್ರು ಆಸ್ಪತ್ರೆ ವೈದ್ಯರು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ತೀವ್ರ ಉಸಿರಾಟದ ಸಮಸ್ಯೆಯಿಂದ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಉಪಪ್ರಧಾನಿ, ಬಿಜೆಪಿ ಹಿರಿಯ ಮುಖಂಡ ಎಲ್. ಕೆ. ಅಡ್ವಾಣಿ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು‌ ಮಾಹಿತಿ ನೀಡಿವೆ.

98 ವರ್ಷದ ಅಡ್ವಾಣಿಯವರು ಸದ್ಯ ಸತತ ವೈದ್ಯಕೀಯ ಮೇಲ್ವಿಚಾರಣೆಯಲ್ಲಿದ್ದು, ಅವರಿಗೆ ಅಗತ್ಯ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಚಿಕಿತ್ಸೆಗೆ ಸ್ಪಂದಿಸುತ್ತಿರುವ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ವಯೋಸಹಜ ಆರೋಗ್ಯ ಸಮಸ್ಯೆಗಳ ಕಾರಣದಿಂದ ಅಡ್ವಾಣಿ ಅವರು ಈ ವರ್ಷದ ಮೇ ತಿಂಗಳಲ್ಲಿಯೂ ಇದೇ ಆಸ್ಪತ್ರೆಗೆ ದಾಖಲಾಗಿದ್ದರು. ಕೆಲವು ದಿನಗಳ ಕಾಲ ವೈದ್ಯಕೀಯ ಆರೈಕೆಯಲ್ಲಿದ್ದ ಬಳಿಕ ಅವರನ್ನು ಬಿಡುಗಡೆ ಮಾಡಲಾಗಿತ್ತು.

Must Read