ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯದಲ್ಲಿ ಹಠಾತ್ ಏರುಪೇರು ಕಂಡುಬಂದಿದ್ದು ಅವರನ್ನು ತುರ್ತು ಚಿಕಿತ್ಸೆಗಾಗಿ ದೆಹಲಿಯ ಇಂದ್ರಪ್ರಸ್ಥ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಿರಿಯ ನಾಯಕನ ಅನಾರೋಗ್ಯದ ಕುರಿತು ಮಾಹಿತಿ ಹೊರಬಿದ್ದ ಬೆನ್ನಲ್ಲೇ ಅವರ ಬೆಂಬಲಿಗರು ಹಾಗೂ ರಾಜಕೀಯ ವಲಯದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ವೈದ್ಯರ ನಿಗಾದಲ್ಲಿ ಅಡ್ವಾಣಿ
ಶುಕ್ರವಾರ ಸಂಜೆ ಸುಮಾರು 7.30ರ ವೇಳೆಗೆ ಅಡ್ವಾಣಿ ಅವರನ್ನು ಆಸ್ಪತ್ರೆಗೆ ಕರೆತರಲಾಗಿದ್ದು, ವೈದ್ಯರ ತಂಡ ಅವರ ಆರೋಗ್ಯದ ಮೇಲೆ ನಿರಂತರ ನಿಗಾ ಇರಿಸಿದೆ.
ಆಡ್ವಾಣಿಯವರಿಗೆ ಕಳೆದ ರಾತ್ರಿ ಹಠಾತ್ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಆಸ್ಪತ್ರೆಯ ಶ್ವಾಸಕೋಶ ವಿಭಾಗದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.



