October 17, 2026
Saturday, October 17, 2026
spot_img

ಮಡಿಕೇರಿ–ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಇಬ್ಬರ ದುರ್ಮ*ರಣ

ಹೊಸದಿಗಂತ ವರದಿ ಮಡಿಕೇರಿ:

ಮಡಿಕೇರಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮಾರುತಿನಗರ ಬಳಿ ಶುಕ್ರವಾರ ತಡರಾತ್ರಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನವರೆಂದು ಗುರುತಿಸಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.

ಮಡಿಕೇರಿ ಸುತ್ತಮುತ್ತಲ ಪ್ರವಾಸಿ ತಾಣಗಳನ್ನು ಹಾಗೂ ರಾತ್ರಿ ದಸರಾ ಕಾರ್ಯಕ್ರಮ ವೀಕ್ಷಿಸಿ ಮರಳುತ್ತಿದ್ದ ಕಾರು ಸುಂಟಿಕೊಪ್ಪ ಸಮೀಪದ ಏಳನೇ ಹೊಸಕೋಟೆ- ಮಾರುತಿನಗರ ನಡುವಿನ ರಾಷ್ಟ್ರೀಯ ಹೆದ್ದಾರಿ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ.

ಪರಿಣಾಮವಾಗಿ ಕಾರಿನಲ್ಲಿದ್ದ ಐವರ ಪೈಕಿ ಚಾಲಕ ಹಾಗೂ ಮತ್ತೋರ್ವ ಸ್ಥಳದಲ್ಲೇ ಸಾವಿಗೀಡಾದರೆ, ಇತರ ಮೂವರ ತಲೆ, ಕೈ ಕಾಲುಗಳಿಗೆ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಶುಕ್ರವಾರ ತಡರಾತ್ರಿ ಸುರಿಯುತ್ತಿದ್ದ ಜಿಟಿಜಿಟಿ ಮಳೆಗೆ ರಸ್ತೆ ಸರಿಯಾಗಿ ಕಾಣಿಸದೆ ಈ ಅಪಘಾತ ಸಂಭವಿಸಿರಬಹುದೆಂದು ಶಂಕಿಸಲಾಗಿದ್ದು, ಸುಂಟಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Must Read