ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರದ ಬಳಿ ಹಣ ಇಲ್ಲ, ಸರ್ಕಾರ ಪಾಪರ್ ಆಗಿದೆ. ಇದನ್ನು ಎಷ್ಟು ಬೇಗ ಒಪ್ಪಿಕೊಳ್ಳುತ್ತದೆಯೋ ಅಷ್ಟು ಒಳ್ಳೆಯದು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಜೀನಾಮೆ ನೀಡಬೇಕು ಇಲ್ಲವೋ ರಾಜ್ಯ ಸರ್ಕಾರ ದಿವಾಳಿಯಾಗಿದೆ ಎನ್ನುವುದನ್ನು ಬಹಿರಂಗವಾಗಿ ಒಪ್ಪಿಕೊಳ್ಳಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಒತ್ತಾಯಿಸಿದ್ದಾರೆ.
ಸರ್ಕಾರ ದಿವಾಳಿಯಾಗಿದೆ. ಹಣಕ್ಕಾಗಿ ಹಣಕಾಸು ಇಲಾಖೆ ಪ್ರತಿದಿನ ಬೇಡಿಕೊಳ್ಳಬೇಕಾಗಿದೆ ಇಲ್ಲವೇ ಸಾಲ ಮಾಡಬೇಕಾಗಿದೆ. ಸರ್ಕಾರದ ಬಳಿ ಹಣವೇ ಇಲ್ಲ ಎಂದು ಆರೋಪಿಸಿದರು. ಇತ್ತೀಚೆಗೆ ಹಣಕಾಸು ಇಲಾಖೆಯೂ ಹಣದ ಕೊರತೆಯನ್ನು ಒಪ್ಪಿಕೊಂಡಿದೆ. ಸಾಲ, ಗ್ಯಾರಂಟಿಗಳು ರಾಜ್ಯಕ್ಕೆ ಹೊರೆಯಾಗಿವೆ. ಇದನ್ನು ಒಪ್ಪಿಕೊಳ್ಳಬೇಕು ಎಂದು ಹೇಳಿದ್ದಾರೆ.
ಕಳೆದ 15 ದಿನಗಳಿಂದ ರಾಜ್ಯ ಸರ್ಕಾರ ಅಸ್ಥಿರವಾಗಿರುವಂತೆ ಕಂಡುಬರುತ್ತಿದೆ. ಈ ಪರಿಸ್ಥಿತಿಯ ಬಗ್ಗೆ ಅಧಿಕಾರಿಗಳೂ ಸೂಕ್ತವಾಗಿ ಸ್ಪಂದಿಸುತ್ತಿಲ್ಲ ಎಂದು ಆರ್ ಅಶೋಕ್ ಆರೋಪಿಸಿದರು.



