October 19, 2026
Monday, October 19, 2026
spot_img

ದೇವರಾಜ ಅರಸು ಉನ್ನತ ಶಿಕ್ಷಣ ಸಂಸ್ಥೆಯಿಂದ ಮಾಜಿ ಸಿಎಂ ಸಿದ್ದರಾಮಯ್ಯಗೆ ಗೌರವ ಡಾಕ್ಟರೇಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ದೇವರಾಜ ಅರಸು ಉನ್ನತ ಶಿಕ್ಷಣ ಸಂಸ್ಥೆಯಿಂದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಡಾಕ್ಟರೇಟ್‌ ಗೌರವ ನೀಡಲಾಗಿದೆ. ಬೆಂಗಳೂರು, ಮೈಸುರು ವಿಶ್ವವಿದ್ಯಾಲಯ ಹಾಗೂ ದೇವರಾಜ ಅರಸು ಉನ್ನತ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ ಘೋಷಣೆ ಮಾಡಿದ್ದ ಡಾಕ್ಟರೇಟ್‌ನ್ನು ಸಿದ್ದರಾಮಯ್ಯ ಅವರು ನಿರಾಕರಿಸಿದ್ದರು. ಆದರೆ ಇದೀಗ ಎಲ್ಲರ ಒತ್ತಾಯದ ಮೇರೆಗೆ ಡಾಕ್ಟರೇಟ್‌ನ್ನು ಸ್ವೀಕರಿಸಿದ್ದಾರೆ.

ಆರ್‌.ಎಲ್ ಜಾಲಪ್ಪ ಆಸ್ಪತ್ರೆ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯನವರು ದೇವರಾಜ ಅರಸು ಮೆಡಿಕಲ್ ಕಾಲೇಜಿನಿಂದ ನೀಡಿದ ಗೌರವ ಡಾಕ್ಟರೇಟ್ ಅನ್ನು ಸ್ವೀಕರಿಸಿದ್ದಾರೆ.‌ ಒಂದು ವರ್ಷದ ಹಿಂದೆಯೇ ಕಾಲೇಜು ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಘೋಷಿಸಲಾಗಿತ್ತಾದರೂ ಸಿದ್ದರಾಮಯ್ಯ ನಿರಾಕರಿಸಿದ್ದರು. ಆದರೆ ಇಂದು ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಿದ್ದರಾಮಯ್ಯನವರ ಹೆಸರು ಘೋಷಣೆ ಮಾಡಲಾಯ್ತು. ಈ ವೇಳೆ ಸಿದ್ದರಾಮಯ್ಯ ಅವರು ಆಶ್ಚರ್ಯಗೊಂಡರು. ಕೊನೆಗೆ ಗಣ್ಯರ ಒತ್ತಾಯದ ಮೇರೆಗೆ ಸಿದ್ದರಾಮಯ್ಯನವರು ಡಾಕ್ಟರೇಟ್ ಸ್ವೀಕರಿಸದರು.

ಸಿಎಂ ಸಿದ್ದರಾಮಯ್ಯ ಅವರು 2 ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಅಲ್ಲದೇ ಕರ್ನಾಟಕದಲ್ಲೇ ಅತಿ ಹೆಚ್ಚು ಬಜೆಟ್ ಮಂಡಿಸಿದ ನಾಯಕ ಹಾಗೂ ಸಿದ್ದರಾಮಯ್ಯ ಅವರು ಕರ್ನಾಟಕದ ಅತಿ ಹೆಚ್ಚು ಅವಧಿಯ ಸಿಎಂ ಆಗಿದ್ದಾರೆ. ಇಷ್ಟು ಮಾತ್ರವಲ್ಲದೆ ಅವರ ಅಧಿಕಾರದ ಅವಧಿಯಲ್ಲಿ ಜನಪರ ಐದು ಗ್ಯಾರಂಟಿ ಯೋಜನೆ ಜಾರಿ ಮಾಡುವ ಮೂಲಕ ಜನಪ್ರಿಯ ಯೋಜನೆಗಳ ಜಾರಿಯಿಂದಾಗಿ ಬಡ ಮತ್ತು ಮಧ್ಯಮ ವರ್ಗಕ್ಕೆ ಆಧಾರವಾಗುವಂತ ಯೋಜನೆ ಜಾರಿಗೆ ತಂದಿದ್ದಾರೆ. ಈ ಕಾರಣಕ್ಕಾಗಿ ಅವರಿಗೆ ಡಾಕ್ಟರೇಟ್‌ ಘೋಷಣೆ ಮಾಡಲಾಗಿದೆ.

Must Read