ಹೊಸದಿಗಂತ ವರದಿ ಮಂಗಳೂರು:
ಇಲ್ಲಿನ ಕೊಣಾಜೆ ಠಾಣಾ ವ್ಯಾಪ್ತಿಯ ಬೋಳಿಯಾರ್ ಸಮೀಪದ ಕುರ್ನಾಡು ಪೆಟ್ರೋಲ್ ಪಂಪ್ ಬಳಿ ಸ್ಕೂಟರ್ ಗೆ ಹಿಂಬದಿಯಿಂದ ಬಂದ ಪಿಕಪ್ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ಘಟನೆ ಸೋಮವಾರ ಸಂಜೆ ಸಂಭವಿಸಿದೆ. ಘಟನೆಯಲ್ಲಿ ಸಹ ಸವಾರ ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಾಥಮಿಕ ಮಾಹಿತಿ ಪ್ರಕಾರ ಮೃತಪಟ್ಟ ಯುವಕನನ್ನು ಕಿನ್ಯ ಅರೆಬಿನಗರದ ಮಹಮ್ಮದ್ ಅಫ್ರಾಝ್ ( 22) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:
ಬೋಳಿಯಾರ್ ಕಡೆಯಿಂದ ಮುಡಿಪು ಕಡೆಗೆ ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಬಂದ ಪಿಕಪ್ ವಾಹನವು ಡಿಕ್ಕಿ ಹೊಡೆದಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ದ್ವಿಚಕ್ರ ವಾಹನವು ವಿದ್ಯುತ್ ಕಂಬಕ್ಕೆ ಡಿಕ್ಕಿಹೊಡೆದು ವಿದ್ಯುತ್ ಕಂಬವು ಮುರಿದು ಬಿದ್ದಿದೆ.

ಈ ಸಂದರ್ಭದಲ್ಲಿ ಅರ್ಫಾನ್ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರ ಗಾಯಗೊಂಡ ಮತ್ತೊರ್ವನನ್ನು ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಅಪಘಾತದ ಬಗ್ಗೆ ಹಲವಾರು ಪೋಸ್ಟ್ ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇವುಗಳ ಮೇಲೂ ನಿಗಾ ಇರಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



