ಹೊಸದಿಗಂತ ಡಿಜಿಟಲ್ ಡೆಸ್ಕ್:
ದಸರಾ ಕಾರ್ಯಕ್ರಮದಲ್ಲಿ ನಟಿ ರಚಿತಾ ರಾಮ್ ಅವರ ಜೊತೆ ಅಭಿಮಾನಿಯೊಬ್ಬ ಅನುಚಿತವಾಗಿ ವರ್ತನೆ ಮಾಡಿದ್ದಾನೆ.
ತುಮಕೂರು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ದಸರಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದರಲ್ಲಿ ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಅಶ್ವಿಜಾ ಅವರ ಜೊತೆ ರಚಿತಾ ರಾಮ್ ರ್ಯಾಂಪ್ ವಾಕ್ ಮಾಡುತ್ತಿದ್ದರು.
ಅಭಿಮಾನಿಗಳ ನಡುವೆ ನಿರ್ಮಿಸಿದ್ದ ವಾಕ್ ಟ್ರ್ಯಾಕ್ನಲ್ಲಿ ರ್ಯಾಂಪ್ ವಾಕ್ ಮಾಡುತ್ತಿದ್ದ ನಟಿ ರಚಿತಾ ಕಡೆಗೆ ಓಡಿಬಂದು, ಅವರ ಹೆಗಲ ಮೇಲೆ ಕೈ ಹಾಕಿ ಸೆಲ್ಫಿ ತೆಗೆದುಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ನಟಿಯನ್ನು ಎಳೆದಾಡಿದ್ದು, ಪೊಲೀಸರು ಮಧ್ಯಪ್ರವೇಶಿಸಿ ಆತನನ್ನು ಹಿಡಿದಿದ್ದಾರೆ.
ಕೆಲವು ದಿನಗಳ ಹಿಂದೆ ಅಭಿಮಾನಿಗಳಿಬ್ಬರು ರಚಿತಾ ಅವರ ಕೆನ್ನೆಯನ್ನು ಮುಟ್ಟಿ ಓಡಿಹೋಗಿದ್ದರು. ಆಗ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಇದೀಗ ಇಂಥದ್ದೇ ಮತ್ತೊಂದು ಘಟನೆ ನಡೆದಿದ್ದು, ಹೆಣ್ಣುಮಕ್ಕಳ ಸೇಫ್ಟಿ ಬಗ್ಗೆ ಪ್ರಶ್ನೆಮೂಡುವಂತಾಗಿದೆ.



