October 21, 2026
Wednesday, October 21, 2026
spot_img

WEATHER | ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಗುಡುಗು ಜೊತೆ ಧಾರಾಕಾರ ವರ್ಷಧಾರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಮುಂದಿನ ಕೆಲವು ದಿನಗಳು ಭಾರೀ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಆದರೆ, ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಮುಖ್ಯವಾಗಿ ಒಣ ಹವಾಮಾನ ಮುಂದುವರಿಯಲಿದೆ. ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾದರೆ, ಇನ್ನು ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಪ್ರಯಾಣಿಕರು ಹಾಗೂ ರೈತರು ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾದರೆ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.

Must Read