ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಶ್ವವಿಖ್ಯಾತ ದಸರಾ ಜಂಬೂ ಸವಾರಿ ಮೆರವಣಿಗೆಗೆ ಮೈಸೂರು ಸಕಲ ಸಿದ್ಧತೆ ಮಾಡಿಕೊಂಡಿದ್ದು, ಇಂದು ಸಂಜೆ 4:10ರಿಂದ 4:35ರ ಮೀನ ಲಗ್ನದ ಶುಭ ಮುಹೂರ್ತದಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಯ ಉತ್ಸವಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿ ಶುಭಾರಂಭಗೊಳ್ಳಲಿದೆ.
ಇಂದು ಮಧ್ಯಾಹ್ನ 01:36ರಿಂದ 01:56ರವರೆಗೆ ಸಲ್ಲುವ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದ ಬಳಿ ಇರುವ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿರುವ ನಂದಿ ಕಂಬಕ್ಕೆ ಪೂಜೆ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ತದನಂತರ ಅರಮನೆ ಮುಂಭಾಗದ ವಿಐಪಿ ಸೀಟ್ಗಳಲ್ಲಿ ಗಣ್ಯರು ಆಸೀನರಾದ ನಂತರ ಮೆರವಣಿಗೆ ಆರಂಭವಾಗಲಿದೆ. ಇದರಲ್ಲಿ ನಿಶಾನೆ ಅಭಿಮನ್ಯು ದಸರಾ ಮೆರವಣಿಗೆಯನ್ನು ಮುನ್ನಡೆಸಲಿದ್ದು, ಬಳಿಕ ಸಾಲಾನೆಗಳು, ಕಲಾತಂಡಗಳು, ಸ್ತಬ್ಧ ಚಿತ್ರಗಳು ಹಾಗೂ ಪೊಲೀಸ್ ಬ್ಯಾಂಡ್ ಸೇರಿದಂತೆ ವಿವಿಧ ಪ್ರಕಾರದ ತಂಡಗಳು ಮೆರವಣಿಗೆ ಹೊರಡಲಿವೆ. ಸಂಜೆ 04:10ರಿಂದ 04:35ರವರೆಗಿನ ಶುಭ ಮೀನ ಲಗ್ನದಲ್ಲಿ ಚಿನ್ನದ ಅಂಬಾರಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಇತರು ಗಣ್ಯರು ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿಗೆ ಚಾಲನೆ ನೀಡಲಿದ್ದಾರೆ. ಬನ್ನಿಮಂಟಪದವರೆಗೆ ಆನೆ ಪ್ರಶಾಂತ ಚಿನ್ನದ ಅಂಬಾರಿಯನ್ನು ಹೊತ್ತು ಸಾಗಲಿದ್ದಾನೆ.



