October 21, 2026
Wednesday, October 21, 2026
spot_img

ಕಲ್ಯಾಣ ಕರ್ನಾಟಕದಲ್ಲಿ ದಸರಾ ಉತ್ಸವ ಆಯೋಜನೆಗೆ ಚಿಂತನೆ: ಮಲ್ಲಿಕಾರ್ಜುನ ಖರ್ಗೆ

ಹೊಸದಿಗಂತ ವರದಿ ಕಲಬುರಗಿ:

ದೇಶಾದ್ಯಂತ ಆಚರಿಸುವ ಪ್ರಮುಖ ಹಬ್ಬಗಳಲ್ಲಿ ದಸರಾ ಕೂಡ ಒಂದಾಗಿದ್ದು, ನಾಡಿನ ಸಮಸ್ತ ಜನತೆಗೆ ದಸರಾ ಹಬ್ಬದ ಶುಭಾಶಯಗಳನ್ನು ಕೋರುತ್ತೇನೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಕಲಬುರಗಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ದಸರಾ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಇದೇ ಮಾದರಿಯಲ್ಲಿ ಕಲ್ಯಾಣ ಕರ್ನಾಟಕದ ಭಾಗವಾದ ಕಲಬುರಗಿಯಲ್ಲಿಯೂ ದೊಡ್ಡ ಮಟ್ಟದ ದಸರಾ ಕಾರ್ಯಕ್ರಮ ಆಯೋಜಿಸಬೇಕು ಎಂಬ ಉದ್ದೇಶವಿದೆ. ಈ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ, ಸ್ಥಳೀಯ ಜನರ ಮೆಚ್ಚುಗೆಗೆ ಪಾತ್ರವಾಗುವ ಹಾಗೂ ಇಡೀ ಕರ್ನಾಟಕವನ್ನು ಒಗ್ಗೂಡಿಸುವ ಕಾರ್ಯಕ್ರಮ ಆಯೋಜಿಸಲು ಪ್ರಯತ್ನಿಸಲಾಗುವುದು ಎಂದರು.

ರಾಜ್ಯದಲ್ಲಿ ವಾಡಿಕೆಗಿಂತ ಶೇ.40ಕ್ಕೂ ಹೆಚ್ಚು ಮಳೆ ಕೊರತೆಯಾಗಿದ್ದು, ಇದರಿಂದ ಜನರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಪ್ರಕೃತಿಯೇ ಅನುಕೂಲಕರವಾಗಿ ಸ್ಪಂದಿಸಿದರೆ ಮಾತ್ರ ಜನರಿಗೆ ನೆಮ್ಮದಿ ಸಿಗಲಿದೆ ಎಂದು ಹೇಳಿದರು.

ಪ್ರಧಾನಿಗೆ ಎರಡು ಪತ್ರ ಬರೆದಿದ್ದೇನೆ

ಎಸ್‌ಐಆರ್‌ (ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆಯ ಸಂಭವನೀಯ ದುಷ್ಪರಿಣಾಮಗಳು, ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆಯಿಂದ ಉಂಟಾಗಬಹುದಾದ ಪರಿಣಾಮಗಳು ಹಾಗೂ ಮಹಿಳಾ ಮೀಸಲಾತಿ ಜಾರಿ ವಿಳಂಬವಾಗುತ್ತಿರುವುದರ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ವೈಯಕ್ತಿಕವಾಗಿ ಪತ್ರ ಬರೆದಿದ್ದೇನೆ. ಈಗಾಗಲೇ ಎರಡು ಪತ್ರಗಳು ಪ್ರಧಾನಿಯವರಿಗೆ ತಲುಪಿವೆ. ಈ ಎಲ್ಲ ವಿಷಯಗಳನ್ನು ನಾಳೆ ವಿವರವಾಗಿ ಪ್ರಸ್ತಾಪಿಸಿ, ಅವುಗಳ ಕುರಿತು ನನ್ನ ಅಭಿಪ್ರಾಯಗಳನ್ನು ತಿಳಿಸಲಿದ್ದೇನೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.

Must Read