ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಡಹಬ್ಬ ದಸರಾ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ಉತ್ಸವ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ ಮೆರವಣಿಗೆ ಹೊರಡಿಸಲಾಗಿದೆ.
ತೆರೆದ ವಿಶೇಷ ವಾಹನದಲ್ಲಿ ಮೆರವಣಿಗೆ ಆರಂಭವಾಗಿದ್ದು, ಮಂಗಳವಾದ್ಯದೊಂದಿಗೆ ಅರಮನೆ ವರೆಗೆ ಉತ್ಸವ ಮೂರ್ತಿ ಮೆರವಣಿಗೆ ಸಾಗಿದೆ. ಭಕ್ತರು ರಸ್ತೆಯ ಎರಡೂ ಬದಿಗಳಲ್ಲಿ ನಿಂತು ತಾಯಿಯ ದರುಶನ ಪಡೆದರು. ಜಂಬೂಸವಾರಿ ಮೆರವಣಿಗೆಗೆ ಕ್ಯಾಪ್ಟನ್ ಪ್ರಶಾಂತ್ ನೇತೃತ್ವದಲ್ಲಿ ಆನೆಗಳು ಸಿದ್ಧವಾಗಿವೆ.
ಜಂಬೂಸವಾರಿ ಮೆರವಣಿಗೆಯಲ್ಲಿ 13 ಆನೆಗಳ ಪೈಕಿ 12 ಆನೆಗಳು ಮೆರವಣಿಗೆಯಲ್ಲಿ ಭಾಗಿಯಾಗಲಿವೆ. ಈ ಬಾರಿ ಧನಂಜಯನಿಗೆ ಮೆರವಣಿಗೆಯಿಂದ ಕೊಕ್ ನೀಡಲಾಗಿದೆ. ಆನೆಗಳಿಗೆ ಬಣ್ಣ ಬಣ್ಣದ ಚಿತ್ತಾರಗಳಿಂದ ಅಲಂಕಾರ ಮಾಡಲಾಗುತ್ತಿದೆ. ಕಲಾವಿದ ನಾಗಲಿಂಗ ಸ್ವಾಮಿ ನೇತೃತ್ವದ ತಂಡ ಚಿತ್ತಾರ ಕಾರ್ಯ ಮಾಡುತ್ತಿದೆ. ಕಳೆದ 18 ವರ್ಷಗಳಿಂದ ಜಂಬೂಸವಾರಿಯಲ್ಲಿ ಪ್ರಶಾಂತ ಆನೆ ಭಾಗವಹಿಸುತ್ತಿದೆ. ಇದೇ ಮೊದಲ ಬಾರಿಗೆ ಚಿನ್ನದಂಬಾರಿ ಹೊರುವ ಜವಾಬ್ದಾರಿ ಸಿಕ್ಕಿದೆ.



