October 21, 2026
Wednesday, October 21, 2026
spot_img

ಎರಡು ಗುಂಪುಗಳ ನಡುವೆ ಮಾರಾಮಾರಿ : ದೊಣ್ಣೆಗಳಿಂದ ಪರಸ್ಪರ ಹಲ್ಲೆ, ಹಲವರಿಗೆ ಗಾಯ

ಹೊಸದಿಗಂತ ವರದಿ ಕಲಬುರಗಿ:

ರಸ್ತೆ ಕಾಮಗಾರಿ ವಿಚಾರವಾಗಿ ಆರಂಭವಾದ ಜಗಳ ವಿಕೋಪಕ್ಕೆ ತಿರುಗಿ, ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾಂಪುರಹಳ್ಳಿಯಲ್ಲಿ ನಡೆದಿದೆ.

ಎರಡ್ಮೂರು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಮಾರಾಮಾರಿಯ ದೃಶ್ಯಗಳು ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿವೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ರಸ್ತೆ ಕಾಮಗಾರಿ ವಿಚಾರವಾಗಿ ಎರಡು ಗುಂಪುಗಳ ನಡುವೆ ಆರಂಭವಾದ ಮಾತಿನ ಚಕಮಕಿ ವಾಗ್ವಾದಕ್ಕೆ ತಿರುಗಿದೆ. ಬಳಿಕ ಪರಿಸ್ಥಿತಿ ಕೈಮೀರಿ ಎರಡೂ ಗುಂಪಿನವರು ದೊಣ್ಣೆಗಳಿಂದ ಪರಸ್ಪರ ಹೊಡೆದಾಡಿಕೊಂಡಿದ್ದಾರೆ ಎನ್ನಲಾಗಿದೆ.

ಘಟನೆಯಲ್ಲಿ ಎರಡೂ ಗುಂಪುಗಳ ಹಲವರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಕಲಬುರಗಿಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ವಾಡಿ ಪೊಲೀಸ್ ಠಾಣೆಯಲ್ಲಿ ದೂರು ಹಾಗೂ ಪ್ರತಿದೂರು ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Must Read