Saturday, September 20, 2025

ಬೀದರ್‌ನಲ್ಲಿ 10 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ ಕಳ್ಳತನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದ ಬಾಲಾಜಿ ನಗರದಲ್ಲಿ ನಡೆದ ಕಳ್ಳತನದ ಘಟನೆ ಸ್ಥಳೀಯರಲ್ಲಿ ಆತಂಕ ಉಂಟುಮಾಡಿದೆ. ಮನೆಯ ಬೀಗ ಮುರಿದು 10 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿ ಆಭರಣಗಳನ್ನು ಕಳ್ಳರು ದೋಚಿ ಪರಾರಿಯಾದ ಘಟನೆ ವರದಿಯಾಗಿದೆ.

ಪೊಲೀಸ್ ಮಾಹಿತಿಯ ಪ್ರಕಾರ, ಜಾಲೇಂದರ್ ಭೀಮಣ್ಣ ಮತ್ರೆ ಎಂಬುವವರ ಮನೆಯಲ್ಲಿ ಯಾರೂ ಇಲ್ಲದ ಸಮಯವನ್ನು ಬಳಸಿಕೊಂಡು ಕಳ್ಳರು ಕೈಚಳಕ ತೋರಿದ್ದಾರೆ. ಸುಮಾರು 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 250 ಗ್ರಾಂ ಬೆಳ್ಳಿ ಆಭರಣಗಳನ್ನು ಕದ್ದು ನಾಪತ್ತೆಯಾಗಿದ್ದಾರೆ.

ಮಾಲೀಕರು ಮನೆಗೆ ಹಿಂತಿರುಗಿದಾಗ ಕಳ್ಳತನದ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಭಾಲ್ಕಿ ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು. ಘಟನೆ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶ್ವಾನದಳದ ಸಹಾಯದಿಂದ ಸುಳಿವುಗಳನ್ನು ಸಂಗ್ರಹಿಸಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಕಳ್ಳರ ಪತ್ತೆಗಾಗಿ ಬಲೆ ಬೀಸಿದ್ದಾರೆ. ಘಟನೆಯಿಂದ ಸ್ಥಳೀಯರಲ್ಲಿ ಭದ್ರತೆ ಬಗ್ಗೆ ಚಿಂತೆ ಹೆಚ್ಚಾಗಿದೆ.

ಇದನ್ನೂ ಓದಿ